ಮೈಸೂರು,ಆಗಸ್ಟ್,1,2026 (www.justkannada.in): ಕರ್ನಾಟಕದ ಸರ್ವಾಂಗೀಣ ಅಭಿವೃದ್ದಿಗೆ ಸಹಕರಿಸಿ. ಕರ್ನಾಟಕಕ್ಕೆ ಅಗತ್ಯ ಸಹಕಾರ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಪ್ರಧಾನಿ ಮೋದಿ ಅವರು ವಿವೇಕ ಸ್ಮಾರಕ ಉದ್ಘಾಟಿಸಿದರು. ನಂತರ ವೇದಿಕೆಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಮೈಸೂರಿನ ಇತಿಹಾಸ ವಿಶ್ವದ ಇತಿಹಾಸ. ಇಡೀ ಸರ್ಕಾರ ಆಶ್ರಮದ ಶ್ರೀಗಳ ಪರಾಗಿ ನಿಲ್ಲುತ್ತದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ನನ್ನ ಭಾಗ್ಯ. ಎಂದರು.
ಇದೇ ವೇಳೆ ವೇದಿಕೆಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕಕ್ಕೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು. ಹಳ್ಳಿಗಳಲ್ಲಿ ನಗರಗಳಲ್ಲಿ ಯುವಶಕ್ತಿಯನ್ನ ಬಳಸಿಕೊಳ್ಳಬೇಕು. ಹಾಗಾಗಿ ಕೆಲ ಯೋಜನೆಗಳನ್ನ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಕರ್ನಾಟಕದ ಸರ್ವಾಂಗೀಣ ಅಭಿವೃದ್ದಿಗೆ ಸಹಕರಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಕೋರಿದರು.
Key words: CM DK Shivakumar, PM Modi, development, Karnataka, Mysore
The post ಕರ್ನಾಟಕದ ಸರ್ವಾಂಗೀಣ ಅಭಿವೃದ್ದಿಗೆ ಸಹಕರಿಸಿ- ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




