14
February, 2026

A News 365Times Venture

14
Saturday
February, 2026

A News 365Times Venture

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕೆಯುಡಬ್ಲೂಜೆ ದತ್ತಿನಿಧಿ ಮೊತ್ತ 2 ಲಕ್ಷಕ್ಕೆ ಏರಿಕೆ

Date:

ಬೆಂಗಳೂರು,ಜನವರಿ,29,2025 (www.justkannada.in):  ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕೆಯುಡಬ್ಲ್ಯುಜೆ ಪ್ರಶಸ್ತಿ ಮೊತ್ತ 2 ಲಕ್ಷ ರೂಗೆ ಏರಿಕೆ ಆಗಿದೆ.

ಎರಡು ವರ್ಷದ ಹಿಂದೆ ಅಕಾಡೆಮಿಗೆ 1.50 ಲಕ್ಷ ರೂ ಚೆಕ್ ಮೂಲಕ ಹಣ ಪಾವತಿ ಮಾಡುವ ಮೂಲಕ ಕೆಯುಡಬ್ಲ್ಯುಜೆ ಪ್ರಶಸ್ತಿಯನ್ನು ಸ್ಥಾಪಿಸಿತ್ತು. ಅದರ ಮುಂದುವರಿದ ಭಾಗವಾಗಿ 50 ಸಾವಿರ ಚೆಕ್‌ನ್ನು ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನಂ ಮತ್ತು ಕಾರ್ಯದರ್ಶಿ ಸಹನ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕೆಯುಡಬ್ಲೂೃಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ,ಅಕಾಡೆಮಿಯ ಮುನಿರಾಜ್ ಅವರು ಹಾಜರಿದ್ದರು.

ಕೆಯುಡಬ್ಲ್ಯುಜೆ ಹೋರಾಟದ ಲವಾಗಿ ರಾಜ್ಯದಲ್ಲಿ 1982ರಲ್ಲಿ ಪತ್ರಿಕಾ ಅಕಾಡೆಮಿಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿತ್ತು. ನಾಲ್ಕು ದಶಕಗಳ ಇತಿಹಾಸ ಹೊಂದಿರುವ ಅಕಾಡೆಮಿಯು, ಕರ್ನಾಟಕ ಮಾಧ್ಯಮ ಅಕಾಡೆಮಿಯಾಗಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ.

ಕೆಯುಡಬ್ಲ್ಯುಜೆ ಮತ್ತು ಮಾಧ್ಯಮ ಅಕಾಡೆಮಿಯ ನಡುವೆ ಸೌಹಾರ್ಧಯುತ ಸಂಬಂಧ ಇನ್ನಷ್ಟು ಗಟ್ಟಿಯಾಗಿ ಮುಂದುವರಿಯಲಿ ಎನ್ನುವ ಸದಾಶಯದೊಂದಿಗೆ ಕೆಯುಡಬ್ಲೂೃಜೆ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ಪ್ರತಿ ವರ್ಷವೂ ಮಾಧ್ಯಮ ಅಕಾಡೆಮಿಯಲ್ಲಿ ಕೆಯುಡಬ್ಲೂಜೆ ದತ್ತಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರೊಬ್ಬರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಿ ಎನ್ನುವ ಆಶಯ ನಮ್ಮದ್ದಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರತಿಕ್ರಿಯಿಸಿದ್ದಾರೆ.

key words: KUWJ, Endowment Fund, Karnataka Media Academy, increases

The post ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕೆಯುಡಬ್ಲೂಜೆ ದತ್ತಿನಿಧಿ ಮೊತ್ತ 2 ಲಕ್ಷಕ್ಕೆ ಏರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಶ್ರದ್ಧೆ, ಭಕ್ತಿಭಾವದಿಂದ ನೆರವೇರಿದ ಸಾಮೂಹಿಕ ಶ್ರೀ ಹನುಮಾನ್ ಚಾಲೀಸಾ ಪಾರಾಯಣ

ಮೈಸೂರು,ಫೆಬ್ರವರಿ,14,2026 (www.justkannada.in):  ಅವಧೂತ ದತ್ತಪೀಠದ ವತಿಯಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ...

ದಾಖಲೆಗಳ ನಿರ್ಮಿಸಿದ ಭಾಗ್ಯಗಳ ಸರದಾರ..

ಬೆಂಗಳೂರು,ಫೆಬ್ರವರಿ,14,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನ...

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ- ಡಿಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,14,2026 (www.justkannada.in):  ನಮಗೆ ವಿಶ್ವಾಸವಿದೆ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ 141 ಸ್ಥಾನವನ್ನ...

ರೈತರ ಆತ್ಮಹತ್ಯೆ, ಸರ್ಕಾರಿ ಹುದ್ದೆಗಳ ನೇಮಕಾತಿ ಇಲ್ಲ: ‘ಕೈ’ ಸರ್ಕಾರದ ಸಮಾವೇಶಕ್ಕೆ ಕುಟುಕಿದ JDS

ಹಾವೇರಿ,ಫೆಬ್ರವರಿ,14,2026 (www.justkannada.in):  ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನಗಳನ್ನು...