3
March, 2026

A News 365Times Venture

3
Tuesday
March, 2026

A News 365Times Venture

ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ: ಬಿ.ವೈ.ವಿಜಯೇಂದ್ರ

Date:

ಬೆಳಗಾವಿ,ಏಪ್ರಿಲ್,15,2025 (www.justkannada.in):  ಸ್ವಾತಂತ್ರ ನಂತರ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಈ ಹಿಂದೆ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಅದರಲ್ಲಿ ವಿಫಲರಾದರು. ಈಗ ಜಾತಿ ಗಣತಿ ಅಂತಾ ಹಿಂದೂ ಮುಸ್ಲೀಮರನ್ನ ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ.  ಇಡೀ ದೇಶದಲ್ಲಿ ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿದೆ ಎಂದು ಲೇವಡಿ ಮಾಡಿದರು.

ಕರ್ನಾಟಕ ಅಂದ್ರೆ ಅತಿ ಹೆಚ್ಚು ದುಬಾರಿ ರಾಜ್ಯವಾಗಿದೆ. ರಾಜ್ಯದಲ್ಲಿ 50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ.  ನಾಳೆ ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಕಾರಣ ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಸಂಸತ್ತಿನಲ್ಲಿ ವಿರೋಧ ಪಕ್ಷದಲ್ಲಿ ಕೂರಲು ಪರದಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಅಂಬೇಡ್ಕರ್ ಹಾಗೂ ಮುಸ್ಲಿಮರು ನೆನಪಾಗುತ್ತಿದ್ದಾರೆ ಎಂದು  ಬಿವೈ ವಿಜಯೇಂದ್ರ ಹರಿಹಾಯ್ದರು.

Key words: Congress, following divide and rule, policy, B.Y. Vijayendra

The post ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ: ಬಿ.ವೈ.ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪೋನ್ ಕದ್ದಾಲಿಕೆ ಆರೋಪ: ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,3,2026 (www.justkannada.in): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ...

‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ...

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...