ಬೆಂಗಳೂರು,ಮೇ,30,2026 (www.justkannada.in): ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಇದೀಗ ನೂತನ ಸಿಎಂ ಆಯ್ಕೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಿಗದಿಯಾಗಿತ್ತು. ಹೀಗಾಗಿ ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದ್ದು ಸಭೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಹ ಆಗಮಿಸಿದ್ದಾರೆ. ಖಾಸಗಿ ಹೋಟೆಲ್‌ನಿಂದ ನೇರವಾಗಿ ಸಿಎಲ್ಪಿ ಸಭೆ ನಡೆಯುವ ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವ ಡಿಕೆ ಶಿವಕುಮಾರ್ ಅವರು ಸಿಎಲ್ ಪಿ ಸಭೆಗೆ ಗಮಿಸಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಸಿ ವೇಣುಗೋಪಾಲ್ ಜೊತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ನೇರವಾಗಿ ಖಾಸಗಿ ಕಾರಿನಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಶಾಸಕರು ಸಹ ಆಗಮಿಸುತ್ತಿದ್ದಾರೆ. ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಶಾಸಕರಾದ ಟಿ.ಬಿ.ಜಯಚಂದ್ರ, ರಾಮಲಿಂಗಾರೆಡ್ಡಿ, ಸಿ.ಪಿ.ಯೋಗೇಶ್ವರ್, ಆನೇಕಲ್ ಶಿವಣ್ಣ, ಪ್ರದೀಪ್ ಈಶ್ವರ್, ಅಶೋಕ್ ಪಟ್ಟಣ್ , ಪುಟ್ಟರಂಗಶೆಟ್ಟಿ, ನಯನಾ ಮೋಟಮ್ಮ, ಲಕ್ಷ್ಮೀ ಹೆಬ್ಬಾಳ್ಕರ್, ಇಕ್ಬಾಲ್ ಹುಸೇನ್ ಸೇರಿ ಹಲವು ಶಾಸಕರು ಆಗಮಿಸಿದ್ದಾರೆ.
Key words: Countdown, CLP meeting, High command, leaders, MLAs, arrive
The post ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




