10
March, 2026

A News 365Times Venture

10
Tuesday
March, 2026

A News 365Times Venture

ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದು ಕಾರು ಅಪ್ಪಚ್ಚಿ: ಪವಾಡಸದೃಶವಾಗಿ ಇಬ್ಬರು ಪಾರು

Date:

ಬೆಳಗಾವಿ,ಮಾರ್ಚ್,15,2025 (www.justkannada.in): ಚಲಿಸುತ್ತಿದ್ದ ಕಾರಿನ ಮೇಲೆಯೇ ಕಾಂಕ್ರಿಟ್ ಮಿಕ್ಸರ್ ಲಾರಿ ಬಿದ್ದು ಪವಾಡ ದೃಶವಾಗಿ ಇಬ್ಬರು ಪಾರಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸದ್ಯ ಕಾರಿನಲ್ಲಿದ್ದ ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಇಬ್ಬರು ಅಪಾಯದಿಂದ ಪಾರಾಗಿದ್ದು ಬದುಕುಳಿದಿದ್ದಾರೆ.

ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದರು. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡರು. ಕೂಡಲೇ ಸಾರ್ವಜನಿಕರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿದ್ದಾರೆ.

ಬೆಳಗಾವಿ ನಗರ ಹೊರವಲಯದ ಕೆಎಲ್‌ಇ ಆಸ್ಪತ್ರೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಕೆಎ -25 ಎಂಡಿ 6506 ನಂಬರಿನ ವೆಗನರ್ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

Key words: Concrete mixer, lorry ,falls , car, Accident

The post ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದು ಕಾರು ಅಪ್ಪಚ್ಚಿ: ಪವಾಡಸದೃಶವಾಗಿ ಇಬ್ಬರು ಪಾರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...