26
September, 2026

A News 365Times Venture

26
Saturday
September, 2026

A News 365Times Venture

ಕಾವೇರಿ ನೀರು ಹಂಚಿಕೆ ವಿವಾದ: ಎಸಿ ರೂಮ್‌ ನಲ್ಲಿ ಕೂತು ತೀರ್ಮಾನ ಸರಿಯಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ

Date:

ಹಾಸನ, ಜುಲೈ 31,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶ ಎತ್ತಿಹಿಡಿದಿರುವ  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ದ  ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ದೆಹಲಿಯ ಎಸಿ ರೂಮ್‌ ಗಳಲ್ಲಿ ಕೂತು ಈ ನಿರ್ಧಾರವನ್ನ ತೆಗೆದುಕೊಳ್ಳುವ ಬದಲು, ಸಿಡಬ್ಲ್ಯುಎಂಎ ಸದಸ್ಯರು ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಾದ ಕೆಆರ್‌ಎಸ್‌, ಹಾರಂಗಿ, ಕಬಿನಿ, ಹೇಮಾವತಿ ಮತ್ತು ಮೆಟ್ಟೂರು ಪ್ರದೇಶಗಳಿಗೆ ಭೇಟಿ ನೀಡಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ನಿರ್ಧರಿಸಿ ಎಂದು ಸಲಹೆ ನೀಡಿದರು.

ಕರ್ನಾಟಕದಲ್ಲಿ ಸದ್ಯ ಲಭ್ಯವಿರುವ 54ರಿಂದ 55 ಟಿಎಂಸಿ ನೀರಲ್ಲಿ, 10 ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಉಳಿದ 44 ಟಿಎಂಸಿಯಲ್ಲಿ ಬೆಂಗಳೂರು ನಗರದ ಕುಡಿಯುವ ನೀರಿಗಾಗಿ 30 ಟಿಎಂಸಿ ಮತ್ತು ಪರಿಸರ ಸಂರಕ್ಷಣೆಗೆ 10 ಟಿಎಂಸಿ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ, ಮುಂದೆ ಹರಿಯುವ ನೀರನ್ನು ಆಧರಿಸಿ, ಅಂದಾಜು ಲೆಕ್ಕಾಚಾರದ ಮೇಲೆ ನೀರು ಬಿಡುಗಡೆ ಮಾಡಲು ಆದೇಶಿಸುವುದು ಸರಿಯಲ್ಲ ಎಂದು ಹೆಚ್ ಡಿಕೆ ಆಕ್ಷೇಪಿಸಿದ್ದಾರೆ.

Key words: Cauvery water, dispute, H.D. Kumaraswamy, CWMA

The post ಕಾವೇರಿ ನೀರು ಹಂಚಿಕೆ ವಿವಾದ: ಎಸಿ ರೂಮ್‌ ನಲ್ಲಿ ಕೂತು ತೀರ್ಮಾನ ಸರಿಯಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅ. 4 ರಂದು ಪ್ರೀಮಿಯರ್ ಇವೆಂಟ್  ಲೆಟೇಪ್  L’ETAPE ಸೈಕ್ಲಥಾನ್  ಸ್ಪರ್ಧೆ -ಎಂ.ಎನ್ ಅನುಚೇತ್

ಮೈಸೂರು ಸೆಪ್ಟಂಬರ್,25,2026 (www.justkannada.in): ಯುವ ಸಮುದಾಯಗಳ ಹೊಸ ಹೊಸ ಅವಕಾಶಗಳನ್ನು ಸೃಷ್ಟಿಸುವ...

ಅ. 15ರಂದು ಶ್ರೀರಂಗಪಟ್ಟಣ ದಸರಾ ಉದ್ಘಾಟನೆ: ಅ.11ರಿಂದ ಕಾವೇರಿ ಆರತಿ

ಮಂಡ್ಯ,ಸೆಪ್ಟಂಬರ್,26,2026 (www.justkannada.in): ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಅಕ್ಟೋಬರ್ 15ರಂದು...

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಸೆಪ್ಟಂಬರ್,26,2026 (www.justkannada.in):  ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ...

CRIME NEWS; ದೇವರಸನಹಳ್ಳಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ಆರೋಪ: ಇಬ್ಬರ ವಿರುದ್ಧ ದೂರು

  ಮೈಸೂರು, ಸೆ.26, 2026: ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ಮನೆಗೆ ಏಕಾಏಕಿ...