ನವದೆಹಲಿ,ಜುಲೈ,30,2026 (www.justkannada.in) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ.
ಈ ಮೂಲಕ ಕಾವೇರಿ ನದಿ ವಿವಾದ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಇಂದು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸಿಡಬ್ಲ್ಯುಆರ್ ಸಿ ಆದೇಶದಂತೆ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.
ಕಳೆದ ಮೂರ್ನಾಲ್ಕು ದಿನದ ಹಿಂದೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಆದೇಶ ಹೊರಡಿಸಿತ್ತು. ಇದನ್ನ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
Key words: Injustice, state, again, CWMA, orders, release, water, Tamil Nadu
The post ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ CWRC ಆದೇಶ ಎತ್ತಿ ಹಿಡಿದ CWMA appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




