ಬೆಳಗಾವಿ, ಫೆಬ್ರವರಿ 24,2025 (www.justkannada.in): ಪ್ರಯಾಗ್ ರಾಜ್ ನ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ನಡೆದಿದೆ.
ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಹಿಂದೆ ಗೋಕಾಕ್ನಿಂದ ಕ್ರೂಸರ್ ವಾಹನದಲ್ಲಿ ಭಕ್ತರು ಪ್ರಯಾಗ್ ರಾಜ್ನ ಕುಂಭಮೇಳಕ್ಕೆ ತೆರಳುತ್ತಿದ್ದರು. ಈ ಮಧ್ಯೆ ಇಂದು ಬೆಳಗಿನ ಜಾವ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.
Key words: 6 people, Karnataka, die, accident, Kumbh Mela
The post ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತ: ಕರ್ನಾಟಕದ 6 ಮಂದಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.