7
March, 2026

A News 365Times Venture

7
Saturday
March, 2026

A News 365Times Venture

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ. ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಇಂದು 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ 2026-27ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದೇನೆ. ರಾಜ್ಯದ ಅಭಿವೃದ್ದಿ ಪೂರಕವಾದ ಬಜೆಟ್ ಮಂಡಿಸಿದ್ದೇನೆ. ಪ್ರಸಕ್ತ ವರ್ಷ 4.48 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದೇನೆ  ಕಳೆದ ಬಾರಿ 4.09 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಲಾಗಿತ್ತು ಕಳೆದ ವರ್ಷಕ್ಕಿಂತ  38,455 ಕೋಟಿ ರೂ. ಹೆಚ್ಚಾಗಿದೆ ಎಂದರು.

ಕೇಂದ್ರ ಸರ್ಕಾರ ಜಿಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ.  ಕೆಲ ರಾಜ್ಯಗಳು ಇನ್ನೂ ಚೇತರಿಕೊಂಡಿಲ್ಲ ಮೈನಸ್ ಗ್ರೋತ್ ನಲ್ಲಿವೆ.  ಆದರೂ ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಮಹಾರಾಷ್ಟ ನಂಬರ್ ಒನ್ ಇದೆ ಎಂದರು.

ಕೇಂದ್ರ ಸರ್ಕಾರ ಅಸಹಕಾರ  ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯಕ್ಕೆ ಬರಬೇಕಿದ್ದ ಪಾಲು 10,000 ಕೋಟಿ ರೂ. ಕಡಿಮೆಯಾಗಿದೆ.  ಮುಂದೆ ಇದು 15 ಸಾವಿರ ಕೋಟಿ ರೂ.  ಕಡಿಮೆಯಾಗುತ್ತೆ ಆದರೆ ನಾವು ವಿತ್ತೀಯ ಶಿಸ್ತು ಉಲ್ಲಂಘನೆ ಮಾಡಿಲ್ಲ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: budget, CM Siddaramaiah, Central government

The post ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಸಮತೋಲಿತ ಬಜೆಟ್: MLC  ಕೆ.ಶಿವಕುಮಾರ್

ಮೈಸೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿ 17ನೇ ಬಜೆಟ್...

UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1

ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್​ಸಿ) 2025ನೇ ಸಾಲಿನ ಪರೀಕ್ಷಾ...