ಬೆಂಗಳೂರು,ಮಾರ್ಚ್,19,2025 (www.justkannada.in): ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದ್ದು ಒಳ್ಳೆಯ ಸುದ್ದಿ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅಶ್ವತ್ ನಾರಾಯಣ್, ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದ್ದು ಒಳ್ಳೆಯದೇ. ರಾಮನಗರ ಜಿಲ್ಲೆಯಾಗಿಯೇ ಉಳಿಯಬೇಕು. ರಿಯಲ್ ಎಸ್ಟೇಟ್ ಮಾಡುವ ಉದ್ದೇಶವಾಗಿತ್ತು. ಇದು ರಾಮನಗರ ಜಿಲ್ಲೆಗೆ ಮಾಡಿದ ಅಪಮಾನ ಎಂದು ಹೇಳಿದರು.
Key words: Centre, rejection, state government, proposal, MLA, Ashwath Narayan
The post ಕೇಂದ್ರದಿಂದ ರಾಜ್ಯ ಸರ್ಕಾರದ ಪ್ರಸ್ತಾಪ ತಿರಸ್ಕಾರ: ಒಳ್ಳೆಯ ಸುದ್ದಿ ಎಂದ ಶಾಸಕ ಅಶ್ವಥ್ ನಾರಾಯಣ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




