4
May, 2026

A News 365Times Venture

4
Monday
May, 2026

A News 365Times Venture

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌

Date:

ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ನಮ್ಮ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಮೈಸೂರು-ಕೊಡಗು ಕ್ಷೇತ್ರದ ಸಮಸ್ಯೆಗಳು ಹಾಗೂ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾದ ಬಗ್ಗೆ ಮನವಿ ಮಾಡಲಾಯಿತು ಎಂದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಡುಗಡೆ ಮಾಡುವ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್‌ ಡಿಆರ್‌ಎಫ್‌ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು ಎಂದು ತಿಳಿಸಿದರು.

ಕೊಡಗು ಜಿಲ್ಲೆಯಾದ್ಯಂತ ಈ ಬಾರಿ ಅತಿ ಹೆಚ್ಚು ಮಳೆಯಾಗಿದೆ. ಇದಕ್ಕಾಗಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಬೇಕು ಇದೇ ಸಂದರ್ಭದಲ್ಲಿ ವಿವರಿಸಲಾಯಿತು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದರೆ, ತಡೆಗೋಡೆಗಳನ್ನು, ರಸ್ತೆಗಳನ್ನು ದುರಸ್ತಿ ಮಾಡಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದೆ. ಇದಕ್ಕೆ  ಕೇಂದ್ರ ಸಚಿವ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಯದುವೀರ್ ಹೇಳಿದರು.

ತಂಬಾಕು ಮತ್ತು ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ದೊರಕಿಸಿಕೊಡಬೇಕು ಎಂದು ಗೃಹ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಎಚ್ಚರಿಕೆ ಅಗತ್ಯ

ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಗೃಹ ಸಚಿವರಿಗೆ ತಿಳಿಸಲಾಯಿತು. ಈ ವಿಷಯದ ಕುರಿತು ಗೃಹ ಸಚಿವಾಲಯದಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಆಲಿಸಿದ ಗೃಹ ಸಚಿವ ಅಮಿತ್‌ ಶಾ, ಕಾಲಮಿತಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.vtu

Key words: MP, Yaduveer, meet, Union Home Minister, Amit Shah, discussed

The post ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...