ನವದೆಹಲಿ,ಜುಲೈ,25,2026 (www.justkannada.in): ಸಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನೆ ಆಗ್ರಹ ಹೆಚ್ಚಾದ ಬೆನ್ನಲ್ಲೆ ಇದೀಗ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಗೆ ಸುದೀರ್ಘ ಪತ್ರ ಬರೆಯುವ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಖಂಡಿಸಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ಬೃಹತ್ ಹೋರಾಟ ನಡೆಸಿತ್ತು. ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸಹ ಸಂಸತ್ ನ ಒಳಗೆ ಮತ್ತು ಹೊರಗೆ ತೀವ್ರ ಪ್ರತಿಭಟನೆ ನಡೆಸಿದ್ದವು. ಇದೀಗ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಿದ್ದಾರೆ.
Key words: Dharmendra Pradhan, resigns , Union Education Minister
The post ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




