ದಾವಣಗೆರೆ, ಜೂನ್ 16, 2025 (www.justkannada.in): ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಜನಗಣತಿಯನ್ನು 2027 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು.
ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಾಯ್ದೆಯ ಪ್ರಕಾರ ಮರುಗಣತಿ
ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.
Key words: Central government, not conducting, social, educational, economic surveys, CM Siddaramaiah
The post ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.