10
March, 2026

A News 365Times Venture

10
Tuesday
March, 2026

A News 365Times Venture

‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Date:

ಹುಬ್ಬಳ್ಳಿ,ಮಾರ್ಚ್,13,2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರಿ ಸಂಬಳ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು,   ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗ್ಯಾರಂಟಿ ಅನುಷ್ಟಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೇನು ಕೆಲಸ?  ಮಂತ್ರಿ ಅಧಿಕಾರಿಗಳು ಏನು ಕತ್ತೆ ಕಾಯುತ್ತಿದ್ದಾರಾ. ಕಾರ್ಯಕರ್ತರಿಗೆ ಸರ್ಕಾರಿ ಸಂಬಳ ನೀಡುತ್ತಾ ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ರಾಜ್ಯ ಸರ್ಕಾರ ಜನರಿಗೆ ದ್ರೋಹ ಬಗೆದಿದೆ ಎಂದು ಕಿಡಿಕಾರಿದರು.

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.  ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಯಾರನ್ನೋ ರಕ್ಷಿಸಲು ಹೋಗಿ ಸರ್ಕಾರ ಗೊಂದಲಕ್ಕೆ ಸಿಲುಕಿದೆ.  ಕೇಸ್ ಅನ್ನು  ಸರ್ಕಾರ ನಿರ್ವಹಿಸುತ್ತಿರುವ ರೀತಿ ನೋಡಿದರೇ ಸರ್ಕಾರ ವಿಫಲವಾಗಿದ ಎಂದು ಎದ್ದು ಕಾಣುತ್ತಿದೆ. ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಕೆಲವರ ಹೆಸರು,  ರಾಜಕಾರಣಿಗಳ ಸಚಿವರ ಬಗ್ಗೆ ವರದಿ ಬರುತ್ತಿದೆ ಎಂದರು.

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಹಿಂದೆ ಸಚಿವರಿಬ್ಬರ ಕೈವಾಡವಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಆರೋಪಿಸಿದ್ದರು.

Key words: Government salary, congress workers, Union Minister, Prahlad Joshi

The post ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...