ಬೆಂಗಳೂರು,ಜುಲೈ,16,2025 (www.justkannada.in): ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ರಣದೀಪ್ ಆಡಳಿತ ಹೇರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಶಾಸಕರು ಸಚಿವರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಆರ್.ಅಶೋಕ್, ರಾಜ್ಯದಲ್ಲಿ “ರಣದೀಪ್” ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ಲೇವಡಿ ಮಾಡಿದ್ದಾರೆ.
ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ”ರಣದೀಪ್ ” ಆಡಳಿತ ಹೇರಿದೆ.
ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್ ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ.
ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ, ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ರಾಹುಲ್ ಗಾಂಧಿ ಅವರಿಗೆ ಶಕ್ತಿ ಇಲ್ಲ.
ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
Key words: Congress, high command, imposed, ‘Randeep rule, R. Ashok
The post ‘ಕೈ’ ಹೈಕಮಾಂಡ್ ರಾಜ್ಯದಲ್ಲಿ ‘ರಣದೀಪ್’ ಆಡಳಿತ ಹೇರಿದೆ-ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.