ಚೆನ್ನೈ,ಏಪ್ರಿಲ್,16,2026 (www.justkannada.in): ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಈ ನಡುವೆ ತಮಿಳುನಾಡು ಸಿಎಂ ಸ್ಟಾಲಿನ್ ಆಕ್ರೋಶ ಮಸೂದೆಯ ಪ್ರತಿ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರ ಮರುವಿಂಗಡಣೆ ಮಸೂದೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಕ್ಷೇತ್ರ ಮರುವಿಂಗಡಣೆ ಮಸೂದೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಕಪ್ಪು ಬಟ್ಟೆ ಧರಿಸಿ ಕಪ್ಪು ಧ್ವಜ ಹಾರಿಸಿ ಪ್ರತಿಭಟಿಸಿದ್ದು, ಕೇಂದ್ರದ ಪ್ರಸ್ತಾವಿತ ಮಸೂದೆ ಪ್ರತಿಯನ್ನು ಸುಟ್ಟು ಹಾಕಿದ್ದಾರೆ. ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿರುವ ಸ್ಟಾಲಿನ್ ಇದು ಕರಾಳ ಕಾನೂನು ಎಂದು ಕರೆದು ಕಪ್ಪು ಬಾವುಟ ಹಾರಿಸಲು ಕರೆ ನೀಡಿದ್ದಾರೆ.
ಅಲ್ಲದೆ ಈ ಮಸೂದೆ ತಮಿಳರ ಹಕ್ಕು ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿಯಾಗಿದೆ. ಮಸೂದೆಯಿಂದ ದಕ್ಷಿಣ ಭಾರತದ ರಾಜ್ಯಗಳ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.
Key words: constituency redelineation bill, dark law, Tamil Nadu CM, Stalin
The post ಕ್ಷೇತ್ರ ಮರು ವಿಂಗಡಣೆ ಮಸೂದೆ ಪ್ರತಿ ಸುಟ್ಟು ಹಾಕಿ ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




