ಬೆಂಗಳೂರು,ಫೆಬ್ರವರಿ,25,2026 (www.justkannnada.in): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾದರೂ ಸರಿಯಾಗಿ ನೇಮಕಾತಿಗಳನ್ನ ಮಾಡದೇ ಖಾಲಿ ಹುದ್ದೆಗಳ ಭರ್ತಿಗೆ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಅತ್ತ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಆದರೆ ಇತ್ತ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಈಗಲೂ 35 ರಿಂದ 40 ಸಾವಿರ ಹುದ್ದೆ ಭರ್ತಿ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.
ಖಾಲಿ ಹುದ್ದೆಗಳ ಭರ್ತಿಗಾಗಿ ನಿನ್ನೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ನಡೆದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ , ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಸಿದ್ದವಿದೆ. ಈಗಲೂ 35ರಿಂದ 40 ಸಾವಿರ ಹುದ್ದೆ ಭರ್ತಿ ಮಾಡಿದ್ದೇವೆ. ಈಗ ಒಳ ಮೀಸಲಾತಿ ವಿಚಾರವಾಗಿ ಸ್ವಲ್ಪ ಸಮಸ್ಯೆ ಇದೆ ಎಲ್ಲವನ್ನೂ ಸರಿಪಡಿಸಿಕೊಂಡು ನೇಮಕಾತಿ ಆಗುತ್ತೆ ಎಂದರು.
ಗುರುವಾರ ಕ್ಯಾಬಿನೆಟ್ ನಲ್ಲೂ ಇದರ ಬಗ್ಗೆ ಚರ್ಚೆ ಮಾಡುತ್ತೇವೆ. ಮೀಸಲಾತಿ ಇರಬೇಕು. ಸಾಮಾಜಿಕ ನ್ಯಾಯಪರನೂ ಇರಬೇಕು ಹೈಕೋರ್ಟ್ ಸುಪ್ರೀಂಕೋರ್ಟ್ ಗೆ ಹೋದಾಗ ಕೆಲವು ತಡವಾಗಬಹುದು ವಯೋಮಿತಿ ಹೆಚ್ಚಳದ ಬಗ್ಗೆಯೂ ಸರ್ಕಾರ ಕ್ರಮ ಕೈಗೊಂಡಿದೆ ಬಿಜೆಪಿ ಅವಧಿಯಲ್ಲಿ ವಿಧಾನಸೌಧ ವ್ಯಾಪಾರ ಸೌಧವಾಗಿತ್ತು ಎಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.
Key words: Ready, fill, vacant, posts, Minister, Priyank Kharge
The post ಖಾಲಿ ಹುದ್ದೆಗಳ ಭರ್ತಿಗೆ ಸಿದ್ದ: ಈಗಲೂ 35ರಿಂದ 40 ಸಾವಿರ ಹುದ್ದೆ ಭರ್ತಿಯಾಗಿದೆ ಎಂದ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




