ಮೈಸೂರು, ಸೆಪ್ಟಂಬರ್,21,2026 (www.justkannada.in) ಮೈಸೂರಿನ :ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ಸಾರ್ವಜನಿಕವಾಗಿ ಮದ್ಯ ಮತ್ತು ಸಿಗರೇಟ್ ಸೇವಿಸಿ ಹುಚ್ಚಾಟ ಮೆರೆದಿದ್ದ 7-8 ಯುವಕರಿಗೆ ಮೈಸೂರು ನಗರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ಸುಮಾರು 7 ರಿಂದ 8 ಜನ ಹುಡುಗರು ಗುಂಪಾಗಿ ಕುಳಿತು ಮದ್ಯಪಾನ ಮಾಡಿ ಸಾರ್ವಜನಿಕರಿಗೆ ಉಪದ್ರವ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
“Illegal activities at Chamundi hills during morning hours, These guys are consuming alcohol and cigarettes” ಎಂದು ಸಾಮಾಜಿಕ ಜಾಲತಾಣ X ನಲ್ಲಿ ವಿಡಿಯೋ ಪೋಸ್ಟ್ ಆಗಿದ್ದು, ಸುಮಾರು 9 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದರು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಕೃಷ್ಣರಾಜ ಪೊಲೀಸ್ ಠಾಣೆ ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ ವಿಡಿಯೋದಲ್ಲಿದ್ದ ಯುವಕರನ್ನು ಪತ್ತೆ ಮಾಡಿದ್ದಾರೆ.
ಆರೋಪಿಗಳು ಕುಶಾಲನಗರದವರು ಎಂದು ಹೇಳಿಕೊಂಡಿದ್ದು, ಅವರೆಲ್ಲರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ಸೂಕ್ತ ಕಾನೂನು ಕ್ರಮ ಜರುಗಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಮೈಸೂರು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




