ಬೆಂಗಳೂರು,ಜೂನ್,4,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆಗೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದು ಈ ವೇಳೆ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಆರ್ ಸಿಬಿ ಸಂಭ್ರಮಾಚರಣೆಗೆ ಬಂದಿದ್ದ 14 ವರ್ಷದ ಬಾಲಕಿ ದಿವ್ಯಾಂಶಿಕ ಹಾಗೂ ದಂತ ವೈದ್ಯಕೀಯ ವಿದ್ಯಾರ್ಥಿನಿ ಸೇರಿ 10 ಮಂದಿ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಾಯಿ ಅಶ್ವಿನಿ ಚಿಕ್ಕಮ್ಮ ರಚನಾ ಜೊತೆ ದಿವ್ಯಾಂಶಿಕ ಆಗಮಿಸಿದ್ದಳು. ಈ ವೇಳೆ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಕಣ್ಣೂರಿನ ಕನಕಶ್ರೀ ಲೇಔಟ್ ನಿವಾಸಿಯಾಗಿರುವ ದಿವ್ಯಂಶಿಕ 9ನೇ ತರಗತಿ ಓದುತ್ತಿದ್ದಳು.
ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಕಾಲ್ತುಳಿತದಿಂದ ಮೃತಪಟ್ಟವರ ಮೃತದೇಹ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
Key words: 14 -year -old girl, death, Chinnaswamy Stadium, RCB
The post ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ 14 ವರ್ಷದ ಬಾಲಕಿ ಸೇರಿ 10 ಮಂದಿ ಸಾವು: ಬೌರಿಂಗ್ ಆಸ್ಪತ್ರೆಗೆ ಸಿಎಂ ಭೇಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.