ಬೆಂಗಳೂರು,ಜೂನ್,4,2025 (www.justkannada.in): 18 ವರ್ಷದ ಬಳಿಕ ಐಪಿಎಲ್ ಟ್ರೋಫಿ ಗೆದ್ದು ಬೆಂಗಳೂರಿಗೆ ಆಗಮಿಸಿರುವ ಆರ್ ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಲು ಸಜ್ಜಾಗಿರುವ ವೇಳೆಯೇ ದುರಂತವೊಂದು ಸಂಭವಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಓರ್ವ ಅಭಿಮಾನಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಒಳ ಹೋಗುವ ವೇಳೆ ಈ ಘಟನೆ ನಡೆದಿದ್ದು ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತಕ್ಕೆ ಓರ್ವ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇನ್ನು ವಿಧಾನಸೌಧದ ಬಳಿ ಆಟಗಾರರಿಗೆ ಅಭಿನಂದನಾ ಸಮಾರಂಭ ನಡೆಯುತ್ತಿದ್ದು ಸಾವಿರಾರು ಅಭಿಮಾನಿಗಳು ನೆರೆದಿದ್ದಾರೆ.
Key words: RCB, Stampede, Chinnaswamy Stadium, dead
The post ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಓರ್ವ ಸಾವು: ಇಬ್ಬರ ಸ್ಥಿತಿ ಗಂಭೀರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




