18
June, 2026

A News 365Times Venture

18
Thursday
June, 2026

A News 365Times Venture

ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿಗಳು ಮೃತ ಪ್ರಕರಣ: ಸರ್ಕಾರಕ್ಕೆ ಕೇಂದ್ರ ಸಚಿವ HDK ತರಾಟೆ

Date:

ಮೈಸೂರು,ಜೂನ್,17,2026 (www.justkannada.in): ಮೈಸೂರು ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ‌ ಟ್ವೀಟ್ ಮೂಲಕ ಕಿಡಿ ಕಾರಿದ್ದು ರಾಜ್ಯ ಸರ್ಕಾರ, ಸಚಿವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ,  ರೋಗಿಗಳ ಪಾಲಿಗೆ ಮರಣ ಶಾಸನ ಬರೆಯುತ್ತಿರುವ  ಕಾಂಗ್ರೆಸ್  ಸರ್ಕಾರ ! ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11ಸಾವು. ಇದು ಕಾಂಗ್ರೆಸ್‌ ಸರ್ಕಾರದ ಸಂಪೂರ್ಣ ಆಡಳಿತ ವೈಫಲ್ಯವಾಗಿದೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಹರಿಹಾಯ್ದಿದ್ದಾರೆ.

ಆಸ್ಪತ್ರೆಯಲ್ಲಿ ಡಾಕ್ಟರ್‌ ಗಳಿಲ್ಲ, ಎಮರ್ಜೆನ್ಸಿಯಲ್ಲಿ ಕರ್ತವ್ಯ ನಿರ್ವಹಿಸುವವರಿಲ್ಲ. ನರ್ಸ್‌ ಗಳ ಭರವಸೆಯ ಮೇಲೆ ರೋಗಿಗಳ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ.  21 ವರ್ಷದ ಯುವಕನೂ ಸೇರಿ ಹಲವರ ಸಾವು, ಅನೇಕ ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ನರಳಾಟ. ಮೈಸೂರಿನ ಜಯದೇವ ಆಸ್ಪತ್ರೆ ಶವಗಾರವಾಗಿ ಬದಲಾಗಿದೆ.  ಮೃತದೇಹಗಳನ್ನು ನೀಡಲೂ ಸತಾಯಿಸುತ್ತಿದ್ದಾರೆ. ಈ ಸರ್ಕಾರದ ಅಮಾನವೀಯತೆಯ ಪರಮಾವಧಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇವಲ ಗ್ಯಾರಂಟಿಗಳ ಬೆನ್ನು ಬಿದ್ದಿರುವ ಕಾಂಗ್ರೆಸ್‌ ಸರ್ಕಾರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಜೀವಕ್ಕೆ ಗ್ಯಾರಂಟಿ ಕೊಡುತ್ತಿಲ್ಲ. ಗರ್ಭಿಣಿಯರು, ಬಾಣಂತಿಯರು ಮತ್ತು ನವಜಾತ ಶಿಶುಗಳನ್ನು ಬಲಿ ಪಡೆದಿದ್ದನ್ನು ನಾಡಿನ ಜನತೆ ಇನ್ನೂ ಮರೆತಿಲ್ಲ.

ಆರೋಗ್ಯ ಸಚಿವ  ಯುಟಿ ಖಾದರ್ ಅವರೇ ಅಮಾಯಕ ಜನರ ಜೀವಕ್ಕೆ ಬೆಲೆ ಇಲ್ಲವೇ ? ಈ ಕೂಡಲೇ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಕರ್ತವ್ಯ ಲೋಪ ಎಸಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸುತ್ತೇವೆ ಎಂದು ಕೇಂದ್ರ ಸಚಿವ ಹೆಚ್ ಡಿಕೆ ಆಗ್ರಹಿಸಿದ್ದಾರೆ.

Key words: 11 patients, die , Jayadeva Hospital, Union Minister, HDK,  government

The post ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿಗಳು ಮೃತ ಪ್ರಕರಣ: ಸರ್ಕಾರಕ್ಕೆ ಕೇಂದ್ರ ಸಚಿವ HDK ತರಾಟೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರ ಬಿಡದಿ ರೈತರ ಭೂಸ್ವಾದೀನ ತಕ್ಷಣ ಕೈ ಬಿಡಬೇಕು- ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು,ಜೂನ್,17,2026 (www.justkannada.in): ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳಲು...

ಜೂ.20 ರಂದು ಕೆಎಸ್ ಒಯುನಲ್ಲಿ ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ ಸಮಾರಂಭ

ಮೈಸೂರು,ಜೂನ್,17,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಒಯು), ಮುಕ್ತಗಂಗೋತ್ರಿ, ಮೈಸೂರು...

ಜೀವ ಬೆದರಿಕೆ: ಶ್ರೀ ಪ್ರಣವಾನಂದರಾಮ್ ಸ್ವಾಮೀಜಿಗೆ ಭದ್ರತೆ ನೀಡಿವಂತೆ ಸಿಎಂಗೆ ಮನವಿ

ಬೆಂಗಳೂರು, ಜೂ,17,2026 (www.justkannda.in):  ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ...

ಮೈಸೂರಿನಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಅಗ್ನಿ ಅವಘಡ : ಅಬಕಾರಿ ಅಧಿಕಾರಿಗಳು ಸಸ್ಪೆಂಡ್

ಮೈಸೂರು,ಜೂನ್,17,2026 (www.justkannada.in): ಮೈಸೂರು ನಗರದ ದಟ್ಟಗಳ್ಳಿ ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್...