26
August, 2026

A News 365Times Venture

26
Wednesday
August, 2026

A News 365Times Venture

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸೂಚನೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಜನವರಿ 28 ,2025 (www.justkannada.in):  ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ  ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ.  ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು , ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10ಕ್ಕೆ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ  ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ

ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದರು.

ಇ.ಡಿ ನೋಟಿಸ್ ಗೆ ಹೈ ಕೋರ್ಟ್ ತಡೆಯಾಜ್ಞೆ: 

ಮುಡಾ ಹಗರಣ ಸಂಬಂಧ ಇ. ಡಿ ನೋಟೀಸ್ ಜಾರಿ ಮಾಡಿದ್ದು,  ಅದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು  ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದರು.

ಇ.ಡಿ ನೋಟಿಸ್  ರಾಜಕೀಯ ಪ್ರೇರಿತವೇ  ಎಂಬ  ಪ್ರಶ್ನೆಗೆ  ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ  ಎಂದರು.

ನ್ಯಾಯ ದೊರೆಯುವ ಭರವಸೆ 

ಮುಡಾ ಪ್ರಕರಣವನ್ನು ಸಿಬಿಐ ಗೆ ವಹಿಸಬಹುದೆಂಬ ಆತಂಕವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನನಗೇಕೆ ಆತಂಕವಾಗಬೇಕು. ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ  ನಮಗಿದೆ ಎಂದರು.

ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ನಾವು ಬಸವಣ್ಣನವರ ಅನುಯಾಯಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರು ಕುಂಭಮೇಳದಲ್ಲಿ ಮಿಂದೆದ್ದರೆ  ಬಡತನ ಹೋಗುವುದಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಗಂಗೆಯಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ. ನಾವು ಬಸವಣ್ಣನವರ ಅನುಯಾಯಿಗಳು, ‘ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ’ ಎಂಬ ಬಸವಣ್ಣನವರ ಮಾತಿನಲ್ಲಿ ನಮಗೆ ನಂಬಿಕೆ ಇದೆ ಎಂದರು.

Key words:  increase, punishment, caste atrocities, CM Siddaramaiah

The post ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸೂಚನೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು ವರ್ಷಗಳ...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ...

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...