ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಡಿ.ಕೆ.ಶಿವಕುಮಾರ್ ಅವರ ಕನಸಾಗಿತ್ತು. ಅವರ ಕನಸು ನನಸಾಗಿದೆ. ಮುಂದಿನದ್ದು ಏನೇ ಇದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.
ಇಂದು ಸಂಜೆ ಎಲ್ಲಾ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಎಲ್ಲ ಶಾಸಕರೂ ಹೋಗುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈಗ ಯುದ್ಧ ನಡೆಯುತ್ತಿದೆ. ಇದರಿಂದ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಹಕರ ಹಾಗೂ ಹೋಟೆಲ್ ನವರ ಹಿತದೃಷ್ಟಿ ಕಾಪಾಡಬೇಕು ಎಂದರು.
Key words: DK Shivakumar, very, successful, KPCC president, Minister, Lakshmi Hebbalkar
The post ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




