ಕೊಯಂಬತ್ತೂರು, ಏಪ್ರಿಲ್,4,2025 (www.justkannada.in): ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಅಣ್ಣಾಮಲೈ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.
ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತೇನೆ. ಮುಂದಿನ 2ವಾರದಲ್ಲಿ ಹೊಸ ರಾಜ್ಯಾಧ್ಯಕ್ಷರ ಘೋಷಣೆಯಾಗಲಿದೆ. ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ. ಬಿಜೆಪಿ ಕಾರ್ಯಕರ್ತರೊಬ್ಬರು ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ
ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ಅಣ್ಣಾಮಲೈ ತಿಳಿಸಿದ್ದಾರೆ.
Key words: K. Annamalai, announces, resignation, Tamil Nadu, BJP, state president
The post ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.