25
June, 2026

A News 365Times Venture

25
Thursday
June, 2026

A News 365Times Venture

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ

Date:

ಕೊಯಂಬತ್ತೂರು, ಏಪ್ರಿಲ್,4,2025 (www.justkannada.in):  ತಮಿಳುನಾಡಿನ  ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಅಣ್ಣಾಮಲೈ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.

ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತೇನೆ. ಮುಂದಿನ 2ವಾರದಲ್ಲಿ  ಹೊಸ ರಾಜ್ಯಾಧ್ಯಕ್ಷರ ಘೋಷಣೆಯಾಗಲಿದೆ. ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ. ಬಿಜೆಪಿ ಕಾರ್ಯಕರ್ತರೊಬ್ಬರು ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ

ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ಅಣ್ಣಾಮಲೈ  ತಿಳಿಸಿದ್ದಾರೆ.

Key words: K. Annamalai, announces, resignation, Tamil Nadu, BJP, state president

The post ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು,ಜೂನ್,25,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ  ನೂತನ ಆಯುಕ್ತರಾಗಿ...

ಗೃಹ ಸಚಿವರ ಕಾರಿಗೆ ಟ್ರಾಫಿಕ್ ಫೈನ್: 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಲೇವಡಿ ಮಾಡಿದ BJP

ಬೆಂಗಳೂರು, ಜೂನ್,25,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರು...

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...