30
April, 2026

A News 365Times Venture

30
Thursday
April, 2026

A News 365Times Venture

ತುಂಗಭದ್ರಾ ಜಲಾಶಯದಿಂದ ನ.30ರ ತನಕ ಕಾಲುವೆಗಳಿಗೆ ನೀರು: ಸಚಿವ ಶಿವರಾಜ್ ತಂಗಡಗಿ

Date:

ಬೆಂಗಳೂರು, ಜೂನ್, 28, 2025 (www.justkannada.in): ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 57 ಟಿಎಂಸಿ ನೀರಿನ ಸಂಗ್ರಹ ಇದ್ದು, ಜುಲೈ 2 ರಿಂದ ನವೆಂಬರ್ 11ರವರೆಗೆ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 124ನೇ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಸಚಿವ ಶಿವರಾಜ್ ತಂಗಡಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಲಾಶಯದಲ್ಲಿನ‌ ನೀರಿನ ಸಂಗ್ರಹ ಲಭ್ಯತೆಯ ಮೇರೆಗೆ ನೀರಿನ ಬಳಕೆ ಮಾಡಲಾಗುತ್ತಿದೆ. ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಗೆ ಜುಲೈ 2 ರಿಂದ ಜುಲೈ 15 ರವರೆಗೆ 2000 ಕ್ಯೂಸೆಕ್ಸ್ ನಂತೆ, ಜುಲೈ 16 ರಿಂದ 31ರವರೆಗೆ 3000 ಕ್ಯೂಸೆಕ್ಸ್ ನಂತೆ ಮತ್ತು ಆಗಸ್ಟ್ 1ರಿಂದ ನವೆಂಬರ್ 30ರವರೆಗೆ 4100 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು ಎಂದು ಹೇಳಿದರು.

ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಜುಲೈ 10ರಿಂದ ಜುಲೈ 31ರವರೆಗೆ ಸರಾಸರಿ 700 ಕ್ಯೂಸೆಕ್ಸ್ ನಂತೆ ಆಗಸ್ಟ್ 1ರಿಂದ ನವೆಂಬರ್ 30ರವರೆಗೆ 1300 ಕ್ಯೂಸೆಕ್ಸ್, ಬಲದಂಡೆಯ ಕೆಳಮಟ್ಟದ ಕಾಲುವೆಗೆ 500 ಕ್ಯೂಸೆಕ್ಸ್ , ಆಗಸ್ಟ್ 1 ರಿಂದ ನವೆಂಬರ್ 31ರವರೆಗೆ 650 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು. ರಾಯ ಬಸವಣ್ಣ ಕಾಲುವೆಗೆ 220 ಕ್ಯೂಸೆಕ್ಸ್ ಹಾಗೂ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ 25 ಕ್ಯೂಸೆಕ್ ಅಥವಾ ಕಾಲುವೆಯಡಿ ನೀರಿನ ಲಭ್ಯತೆ ಆಧಾರದ ಮೇರೆಗೆ ನೀರು ಹರಿಸಲು ಸಲಹಾ ಸಮಿತಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆದಿದ್ದು, ಅಣೆಕಟ್ಟೆಯ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ರೈತರನ್ನು ಒಳಗೊಂಡಂತೆ ಸಭೆ ನಡೆಸಬೇಕು ರೈತರು ಬೇಡಿಕೆ ಇಟ್ಟಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜುಲೈ 2ನೇ ವಾರ ಅಥವಾ ಮೂರನೇ ವಾರದಲ್ಲಿ ಸಭೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು ಎಂದರು.

ಬೋರ್ಡಿನ ಕೆಲ ಅಧಿಕಾರಿಗಳು ಈ ಬಾರಿ ಒಂದು ಬೆಳೆಗೆ ಮಾತ್ರ ನೀರು ನೀಡಲಾಗುವುದು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂದು ರೈತರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ಇದೀಗ ಒಂದು ಬೆಳೆಗೆ ನೀರು ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ಸಭೆಯಲ್ಲಿ ಎರಡನೇ ಬೆಳೆಗೆ ನೀರು ನೀಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ರೈತರ ಹಿತಕರ ಪಾಡುವುದು ನಮ್ಮ ಉದ್ದೇಶ. ಇದರಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಜಲಾಶಯದ 32 ಗೇಟ್ ಅನ್ನು ಬದಲಾವಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವರು ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಈ ಸಭೆಯಲ್ಲಿ ಅಣೆಕಟ್ಟೆಯ ಪರಿಣಿತ ತಜ್ಞರು ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ವಿವರಿಸಿದರು.

ಸಭೆಯಲ್ಲಿ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಬಿ.ನಾಗೇಂದ್ರ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಎಚ್.ಆರ್.ಗವಿಯಪ್ಪ, ಹಂಪನಗೌಡ ಬಾದರ್ಲಿ, ಬಸವನಗೌಡ ತುರುವಿಹಾಳ್, ಶಿವರಾಜ್ ಪಾಟೀಲ್, ಬಿ.ಎಂ. ನಾಗರಾಜ್, ರೈತ ಮುಖಂಡರು ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.vtu

Key words: Water, Tungabhadra reservoir, canals, Minister, Shivaraj Thangadgi

The post ತುಂಗಭದ್ರಾ ಜಲಾಶಯದಿಂದ ನ.30ರ ತನಕ ಕಾಲುವೆಗಳಿಗೆ ನೀರು: ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್...

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7 ಮಂದಿ...

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...