ತುಮಕೂರು,ಆಗಸ್ಟ್,12,2025 (www.justkannada.in): ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾಗೊಳಿಸಿದ್ದನ್ನು ಖಂಡಿಸಿ ನಾಳೆ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕೆ.ಎನ್ ರಾಜಣ್ಣ ಬೆಂಬಲಿಗರು ತಿಳಿಸಿದ್ದಾರೆ.
ಇಂದು ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜಣ್ಣ ಬೆಂಬಲಿಗರು, ಹೈಕಮಾಂಡ್ ನಿರ್ಧಾರವನ್ನ ನಾಯಕ ಸಮಾಜ ಖಂಡಿಸುತ್ತದೆ. ಕೆಎನ್ ರಾಜಣ್ಣ ಅವರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲದಿದ್ದರೇ ತಾಲ್ಲೂಕು ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕೆ.ಎನ್ ರಾಜಣ್ಣ ಅವರ ವಿರುದ್ದ ಪಿತೂರಿ ಮಾಡಲಾಗಿದೆ. ರಾಜಣ್ಣ ಅವರ ವಜಾ ಖಂಡಿಸಿ ನಾಳೆ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬೆಂಬಲಿಗರು ತಿಳಿಸಿದ್ದಾರೆ.
Key words: KN Rajanna, supporters, decision, massive protest, Tumkur
The post ತುಮಕೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆಗೆ ಕೆ.ಎನ್ ರಾಜಣ್ಣ ಬೆಂಬಲಿಗರ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




