7
March, 2026

A News 365Times Venture

7
Saturday
March, 2026

A News 365Times Venture

ತುಮಕೂರು ಬಳಿ 19 ನವಿಲು ಸಾವು ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

Date:

ಬೆಂಗಳೂರು, ಆಗಸ್ಟ್, 4,2025 (www.justkannada.in):  ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿಯ  ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ- ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ ಅವರು, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ  ನಮ್ಮ ರಾಷ್ಟ್ರಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು, ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ

ನವಿಲುಗಳ ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕ ಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ ತನಿಖೆ ನಡೆಸಿ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮತ್ತು ನಿಯಮಾನುಸಾರ ಕ್ರಮ ಜರುಗಿಸಲು ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

ಜೊತೆಗೆ ಪರಿಶಿಷ್ಟ 1 ಮತ್ತು 2ರ ಯಾವುದೇ ವನ್ಯಜೀವಿ ಮೃತಪಟ್ಟರೂ ಆಡಿಟ್ ಮಾಡಿಸಿ ತತ್ ಕ್ಷಣವೇ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಲು ಕ್ರಮ ವಹಿಸಲೂ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ.

Key words: Minister, Ishwar Khandre, investigation, 19 peacocks, death

The post ತುಮಕೂರು ಬಳಿ 19 ನವಿಲು ಸಾವು ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ ನಡೆಸಿದ್ದು...

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ...

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...