ಬೆಂಗಳೂರು, ಆಗಸ್ಟ್, 8 ,2025 (www.justkannada.in): ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್ಶ. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ. ಎಸ್ ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಅವಿಭಜಿತ ಕಾಂಗ್ರೆಸ್ ನ ಎಐಸಿಸಿ ಅಧ್ಯಕ್ಷರಾಗಿದ್ದವರು. ಪ್ರತಿ ವರ್ಷ ಅವರ ಜನ್ಮದಿನ ಹಾಗೂ ಪುಣ್ಯತಿಥಿಯಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವವನ್ನು ಸರ್ಕಾರ ಸಲ್ಲಿಸುತ್ತಾ ಬಂದಿದೆ ಎಂದರು.
ದೇಶ ಕಂಡ ಅಪ್ರತಿಮ ನಾಯಕರು
ನಿಜಲಿಂಗಪ್ಪನವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶ ಕಂಡ ಅಪ್ರತಿಮ ನಾಯಕರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾದರು. ಏಕೀಕರಣದ ಹೋರಾಟದಲ್ಲಿ ಭಾಗವಹಿಸಿ, ಕರ್ನಾಟಕದ ಏಕೀಕರಣದ ನಂತರ ಮೊದಲನೇ ಮುಖ್ಯಮಂತ್ರಿಗಳಾದರು. ಜನಪರ ಕಾಳಜಿಯಿದ್ದ ಮುಖ್ಯಮಂತ್ರಿಗಳು. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಾಮಾಣಿಕ ರಾಜಕಾರಣಿ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.
Key words: S. Nijalingappa, unparalleled leader, CM, Siddaramaiah
The post ದೇಶ ಕಂಡ ಅಪ್ರತಿಮ ನಾಯಕ ಎಸ್.ನಿಜಲಿಂಗಪ್ಪ: ಅವರ ಸೇವೆ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.