ಬೆಂಗಳೂರು, ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಧರ್ಮಸ್ಥಳವನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ಅಲ್ಲಿನ ಭಕ್ತಿ, ಶ್ರದ್ಧೆ ಪ್ರಕ್ರಿಯೆಗಳ ಮೇಲೆ ನನಗೆ ನಂಬಿಕೆ, ಆತ್ಮವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ ಎಂಬ ವಿಶ್ವಾಸವಿದೆ. ಈ ಪ್ರಕರಣ ಕುರಿತು ಗೃಹ ಸಚಿವರು ಅಧಿವೇಶನದಲ್ಲಿ ಉತ್ತರ ನೀಡುತ್ತಾರೆ ಎಂದರು.
ಮುಖ್ಯಮಂತ್ರಿಗಳಿಗೂ ಈ ವಿಚಾರದಲ್ಲಿ ಬದ್ಧತೆ ಇದೆ. ಯಾರೂ ಕೂಡ ಸುಳ್ಳು, ಷಡ್ಯಂತ್ರ ಮೂಲಕ ಅಪಮಾನ, ಅಪಪ್ರಚಾರ ನಡೆಸುವಂತಿಲ್ಲ ಎಂದು ಸಿಎಂ ನಮಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ. ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: Dharmasthala case, action, DCM, D.K. Shivakumar
The post ಧರ್ಮಸ್ಥಳ ಕೇಸ್: ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಚಿಂತನೆ –ಡಿಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.