ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಎಸ್ ಐಟಿ ಇದೀಗ ರಾಜ್ಯ ಸರ್ಕಾರಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಕೆ ಮಾಡಿದೆ.
ತನಿಖಾ ಪ್ರಗತಿ ವರದಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಅವರು ಭೇಟಿಯಾಗಿ ಸುಮಾರು 50 ನಿಮಿಷಗಳ ಕಾಲ ಚರ್ಚೆ ನಡೆಸಿ ತೆರಳಿದ್ದಾರೆ ಎನ್ನಲಾಗಿದೆ.
ಸರ್ಕಾರಕ್ಕೆ ಸಲ್ಲಿಕೆಯಾಗಿರುವ ತನಿಖಾ ಪ್ರಗತಿ ವರದಿ ಆಧರಿಸಿ ಸದನದಲ್ಲಿ ಚರ್ಚೆಯಾಗಲಿದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉತ್ತರ ನೀಡಲಿದ್ದಾರೆ. ದೂರುದಾರ ಗುರುತು ಮಾಡಿದ್ದ ಸ್ಥಳಗಳಲ್ಲಿ ಅಗೆದು ಎಸ್ ಐಟಿ ಪರಿಶೀಲಿಸಿದ್ದು ಇದೀಗ ದೂರುದಾರನನ್ನ ಎಸ್ ಐಟಿ ವಿಚಾರಣೆಗೊಳಪಡಿಸಿದೆ ಎನ್ನಲಾಗಿದೆ.
Key words: Dharmasthala case, SIT, investigation, progress report, submitted
The post ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.