ಬೆಂಗಳೂರು,ಸೆಪ್ಟಂಬರ್,26,2026 (www.justkannada.in) ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ೧೦ ರೂ ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳು ಆಗ್ರಹಿಸಿದ್ದು ಈ ಸಂಬಂಧ ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಇಂದು ಹಾಲು ಒಕ್ಕೂಟ ಅಧ್ಯಕ್ಷರ ಜೊತೆ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಸದಾಶಿವನಗರದಲ್ಲಿನ ನಿವಾಸದಲ್ಲಿ ಸಭೆ ನಡೆಸಲಿದ್ದಾರೆ. ಸಭೆ ಯಲ್ಲಿ ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ನಂದಿನಿ ಹಾಲಿನ ದರ ಏರಿಕೆಗೆ ಸಮ್ಮತಿ ಸೂಚಿಸಿದರೇ ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಬೀಳುವ ಸಾಧ್ಯತೆ ಇದೆ.




