6
August, 2026

A News 365Times Venture

6
Thursday
August, 2026

A News 365Times Venture

ನಟ ದರ್ಶನ್ ​​ಗೆ ಶಾಕ್: ರೇಣುಕಾಸ್ವಾಮಿ ಕೇಸ್ ​​ನಲ್ಲಿ ಮಾಫಿ ಸಾಕ್ಷಿ ಮಾಡುವಂತೆ ಕೋರ್ಟ್​​ಗೆ ಎ14 ಪ್ರದೋಶ್ ಮನವಿ

Date:

ಬೆಂಗಳೂರು,ಆಗಸ್ಟ್,6,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ. ಇದೀಗ ಪ್ರಕರಣದ 14ನೇ ಆರೋಪಿ ಪ್ರದೋಷ್ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ.

ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಕೋರಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಕೋರ್ಟ್‌ಗೆ ಶರಣಾಗಿದ್ದಾರೆ. ಈ ಹೊಸ ಬೆಳವಣಿಗೆಯು ದರ್ಶನ್ ಗ್ಯಾಂಗ್‌ ಗೆ ಭಾರಿ ಆಘಾತ ತಂದೊಡ್ಡಿದೆ.

ಕೋರ್ಟ್‌ ಗೆ ಪ್ರದೋಷ್ ವಿಶೇಷ ಮನವಿ

ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ಇರುವ ಕೊಠಡಿ ಬಿಟ್ಟು ತಮ್ಮನ್ನು ಪ್ರತ್ಯೇಕ ಜೈಲು ಕೊಠಡಿಯಿಂದ ಹಾಜರುಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ದರ್ಶನ್ ಬೆದರಿಕೆ ಹಾಕುವುದು ಅಥವಾ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಈ ಭದ್ರತಾ ಮನವಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಪ್ರಾಸಿಕ್ಯೂಷನ್ ತನ್ನ ನಿಲುವು ತಿಳಿಸುವಂತೆ ಸೂಚಿಸಿದೆ.

ದರ್ಶನ್ ಮತ್ತು ಪವಿತ್ರಾ ಗೌಡಗೆ ಸಂಕಷ್ಟ

ಈ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಮೊದಲನೇ ಆರೋಪಿ (A1) ಆಗಿದ್ದರೆ, ನಟ ದರ್ಶನ್ ಎರಡನೇ ಆರೋಪಿ (A2) ಆಗಿದ್ದಾರೆ. ಈಗ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ನಟ ದರ್ಶನ್‌ ಗೆ ದೊಡ್ಡ ಮುಳ್ಳಾಗುವ ಸಾಧ್ಯತೆಯಿದೆ. ಪ್ರದೋಷ್ ನೀಡುವ ಹೇಳಿಕೆಗಳು ಈ ಪ್ರಕರಣದ ತನಿಖೆಯಲ್ಲಿ ಅತ್ಯಂತ ನಿರ್ಣಾಯಕವಾಗಲಿವೆ.

ಮಾಫಿ ಸಾಕ್ಷಿಯಾಗಿ ಪ್ರದೋಷ್ ಸತ್ಯ ಬಿಚ್ಚಿಟ್ಟರೆ, ಪ್ರಕರಣದ ಪ್ರಮುಖ ರೂವಾರಿಗಳಿಗೆ ಕಾನೂನಿನ ಕುಣಿಕೆ ಇನ್ನಷ್ಟು ಬಿಗಿಯಾಗಲಿದೆ. ಈ ಅರ್ಜಿ ಸಿನಿಮಾ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ವಿಷಯದಲ್ಲಿ ನ್ಯಾಯಾಲಯ ಪ್ರಾಸಿಕ್ಯೂಷನ್ ಅಭಿಪ್ರಾಯ ಕೇಳಿದೆ.

ಕೃಪೆ

ಟಿವಿ9

Key words: Renukaswamy, Murder case, actor, Darshan, Pradosh, court, pardon witness

The post ನಟ ದರ್ಶನ್ ​​ಗೆ ಶಾಕ್: ರೇಣುಕಾಸ್ವಾಮಿ ಕೇಸ್ ​​ನಲ್ಲಿ ಮಾಫಿ ಸಾಕ್ಷಿ ಮಾಡುವಂತೆ ಕೋರ್ಟ್​​ಗೆ ಎ14 ಪ್ರದೋಶ್ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ- ದಿನೇಶ್ ಗುಂಡೂರಾವ್

ಬೆಂಗಳೂರು,ಆಗಸ್ಟ್,6,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಕಾಂಗ್ರೆಸ್ ನಲ್ಲಿ...

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

  ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು...

ಜಿಂದಾಲ್ ನಿಂದ 5 ವರ್ಷದಲ್ಲಿ 1.20 ಲಕ್ಷ ಕೋಟಿ ರೂ. ಹೂಡಿಕೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,5,2026 (www.justkannada.in): ಉಕ್ಕು ತಯಾರಿಕೆ ಮತ್ತು ಇತರ ವಲಯಗಳಲ್ಲಿ ಛಾಪು ಮೂಡಿಸಿರುವ...

ಶಾಸಕರ ಬೆಂಬಲಿಗರು ಪ್ರತಿಭಟಿಸಿದ್ರೆ ಸಿದ್ದರಾಮಯ್ಯ ಏಕೆ ಮಾತನಾಡಬೇಕು: ಬಿವೈವಿಗೆ ಸಚಿವ ಯತೀಂದ್ರ ತಿರುಗೇಟು

ಬೀದರ್,ಆಗಸ್ಟ್,5,2026 (www.justkannada.in): ಸಚವ ಸ್ಥಾನ ವಂಚಿತರ ಪ್ರತಿಭಟನೆಗೆ ಸಿದ್ದರಾಮಯ್ಯ ಕಾರಣ ಎಂಬ...