ಬೆಂಗಳೂರು,ಆಗಸ್ಟ್,14,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಟ ದರ್ಶನ್ ಜಾಮೀನು ರದ್ದು ಮಾಡಿದ ಬೆನ್ನಲ್ಲೆ ನಟಿ ರಮ್ಯಾ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಕುರಿತು ಪೋಸ್ಟ್ ಮಾಡಿರುವ ನಟಿ ರಮ್ಯಾ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂದು ಬಲವಾದ ಸಂದೇಶ ರವಾನೆಯಾಗಿದೆ. ನ್ಯಾಯವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನ ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ. ನಮ್ಮಲ್ಲಿ ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ. ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ನ್ಯಾಯ ಸಿಗುತ್ತದೆ. ಮುಖ್ಯವಾಗಿ, ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ನಟಿ ರಮ್ಯಾ ತಿಳಿಸಿದ್ದಾರೆ.
Key words: Actress, Ramya, post, actor, Darshan, bail , cancelled
The post ನಟ ದರ್ಶನ್ ಬೇಲ್ ರದ್ದು ಬೆನ್ನಲ್ಲೆ ನಟಿ ರಮ್ಯಾ ಪೋಸ್ಟ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




