ಬೆಂಗಳೂರು,ಜೂನ್,6,2026 (www.justkannada.in): ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ , ರಣದೀಪ್ ಸಿಂಗ್ ಸುರ್ಜೇವಾಲ ಮನವಿ ಮಾಡಿದ್ದಾರೆ. ನನ್ನ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಸಿಎಂ ಡಿಕೆ ಶಿವಕುಮಾರ್, ಸುರ್ಜೇವಾಲರನ್ನ ಭೇಟಿಯಾಗಿದ್ದೆ. ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ರಾಜೀನಾಮೆ ಅಂಗೀಕಾರ ಮಾಡಲ್ಲ ಎಂದು ಸಿಎಂ ಹೇಳಿದ್ದಾರೆ. ನಿನ್ನೆ ಕಾಂಗ್ರೆಸ್ ನಾಯಕರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದರು.
ಜಲಸಂಪನ್ಮೂಲ ಖಾತೆಯನ್ನ ನಾನು ಕೇಳಿರಲಿಲ್ಲ. ಜಲಸಂಪನ್ಮೂಲ ಇಲಾಖೆ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಎಲ್ಲವನ್ನೂ ಸುರ್ಜೇವಾಲರಿಗೆ ವಿವರಿಸಿದ್ದೇನೆ. ಇಬ್ಬರೂ ಏನ್ ತೀರ್ಮಾನ ಮಾಡುತ್ತಾರೆ ನೋಡೋಣ. ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಅಂತಾ ಕೇಳಿರಲಿಲ್ಲ ಮಾತು ಕೊಟ್ಟಂತೆ ನಡೆದುಕೊಳ್ಳಲಿಲ್ಲ ಎಂಬ ಬೇಸರವಿದೆ ಎಂದರು.
ಹೆಚ್ಚುವರಿ ಖಾತೆ ನೀಡುವ ಬಗ್ಗೆ ನಾನು ಏನು ಮಾತನಾಡಲ್ಲ. ಸದ್ಯಕ್ಕೆ ನನ್ನ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ ಎಂದು ರಾಮಲಿಂಗರೆಡ್ಡಿ ತಿಳಿಸಿದ್ದಾರೆ.
Key words: no change, my decision, high command Ramalinga Reddy
The post ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




