ದಾವಣಗೆರೆ,ಜೂನ್,1,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಸಂಬಂಧ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಬಾರದು. ಜನರ ಆಶೀರ್ವಾದದಿಂದ ನಮ್ಮ ಮಗ ಗೆದ್ದಿದ್ದಾನೆ. ಆಡಿಯೋ ವೈರಲ್ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೆ ಎಂದರು.
ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ʻದಾವಣಗೆರೆ ಉಪಚುನಾವಣೆಯಲ್ಲಿ ಕುಕ್ಕರ್‌ಗೆ ವೋಟ್ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಆಡಿಯೋದಲ್ಲಿ ಮುಸ್ಲಿಮರೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಬದಲಾಗಿ ಪಕ್ಷೇತರರಿಗೆ ವೋಟ್ ಹಾಕಬೇಕು ಎಂದು ಆಗ್ರಹಿಸುವುದು ಎಂದು ಹೇಳಿದ್ದಾರೆ ಎನ್ನ. ಒಂದು ವೇಳೆ ಮುಸ್ಲಿಮರು ವೋಟ್ ಹಾಕಿಲ್ಲ ಅಂದ್ರೂ ಓಕೆ, ಕಾಂಗ್ರೆಸ್ ವೋಟ್ ಗಳು ಮೈನಸ್ ಆಗಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ವೋಟ್ ಹಾಕಬೇಡಿ. ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷೇತರರಿಗೆ ಮತ ಹಾಕಿಸಿ. ಬಲವಂತವಾಗಿ ಮನೆಯಿಂದ ಕರೆದು ಬಂದು ವೋಟ್ ಹಾಕಿಸಬೇಡಿ ಎಂದು ಆಡಿಯೋದಲ್ಲಿದೆ.
Key words: Zameer-Audio, Viral, Former Minister, S.S. Mallikarjun
The post ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಬಾರದು- ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




