ಮೈಸೂರು,ಜೂನ್,14,2025 (www.justkannada.in): ನವಂಬರ್ ಗೆ ಸಿಎಂ ಬದಲಾವಣೆ ಆಗುತ್ತದೆ. ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ ನುಡಿದರು.
ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದುವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್ ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿರುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಡಿಸೆಂಬರ್ ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸುತ್ತೀರಿ. ಮರುಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್ ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ ಆಗುತ್ತಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ. ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ ವರದಿಯನ್ನು ತಿಪ್ಪೆಗೆ ಎಸೆದಿದ್ದಾರೆ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.
ಆರ್ ಸಿಬಿ ವಿಜಯೋತ್ಸವ ವೇಳೆ ಡಿಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು
ಆರ್ ಸಿಬಿ ವಿಜಯೋತ್ಸವದ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿ ಬಿಟ್ಟರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದುಕೊಂಡಿದ್ದೆ. ಆದರೆ ಆರ್ ಸಿಬಿ ವಿಜಯೋತ್ಸವ ವೇಳೆ ಡಿಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು. ಆರ್ ಸಿ ಬಿ ಯಲ್ಲಿ ಕರ್ನಾಟಕದ ಆಟಗಾರರೇ ಇಲ್ಲ. ಆರ್ ಸಿಬಿ ಗೂ ಕರ್ನಾಟಕಕ್ಕೂ ಸಂಬಂಧವೇ ಇಲ್ಲ. ಕಾಲ್ತುಳಿತ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗಳು ವೈರುಧ್ಯದಿಂದ ಕೂಡಿವೆ ಎಂದು ಕಿಡಿಕಾರಿದರು.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3:30ಕ್ಕೆ ಕಾಲ್ತುಳಿತ ಆದರೂ ಸಂಜೆ 5:30 ಕ್ಕೆ ಗೊತ್ತಾಯಿತು. ವಿಧಾನಸೌಧ ಕಾರ್ಯಕ್ರಮಕ್ಕೂ, ಚಿನ್ನಸ್ವಾಮಿ ಕ್ರೀಡಾಂಗಣ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ. ರಾಜ್ಯಪಾಲರನ್ನು ಆಹ್ವಾನಿಸಿರಲಿಲ್ಲ ಎಂದೆಲ್ಲ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ ರಾಜ್ಯಪಾಲರನ್ನು ಆಹ್ವಾನಿಸಿದ್ದು ನಾನೇ ಎಂದು ಹೇಳಿದ್ದಾರೆ. ಇವರ ತಪ್ಪು ಇಲ್ಲದಿದ್ದರೇ ಗೋವಿಂದರಾಜು ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಏಕೆ ತೆಗೆದರು ಎಂದು ಹೇಳಬೇಕು? ಎಂದು ಎಚ್ ವಿಶ್ವನಾಥ್ ಆಗ್ರಹಿಸಿದರು.
Key words: CM, change, November, MLC, H. Vishwanath
The post ನವಂಬರ್ ಗೆ ಸಿಎಂ ಬದಲಾವಣೆ: ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗ್ತಾರೆ- ಹೆಚ್.ವಿಶ್ವನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.