ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದಲ್ಲಿ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಳೆಯಿಂದ ಏಪ್ರಿಲ್ 2ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಎಂದರು.
ನಮ್ಮ ಸರ್ಕಾರ ಹಲವು ಸುಧಾರಣೆಗಳನ್ನ ಮಾಡಿ 3 ಪರೀಕ್ಷೆ ಮಾಡಿದ್ದೇವೆ. ವಿದ್ಯಾರ್ಥಿಗಳು ಯಾರು ಆತಂಕ ಪಡಬೇಕಿಲ್ಲ. ಒಂದಲ್ಲ ಇನ್ನೊಂದು ಪರೀಕ್ಷೆ ಬರೆಯಬಹುದು. ಆತಂಕ ಬೇಡ ಎಲ್ಲರಿಗೂ ಒಳ್ಳೆಯದಾಗಲಿ ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಲಿ. ಸರ್ಕಾರ ಕಡೆಯಿಂದ ವಿದ್ಯಾರ್ಥಿಗಳಿಗೆ ಶುಭಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: SSLC exams, tomorrow, CM Siddaramaiah, wishes
The post ನಾಳೆಯಿಂದ SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




