ಮೈಸೂರು,ಜುಲೈ,18,2025 (www.justkannada.in): ನಾಳೆ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.
ಮೈಸೂರಿನ ಮಹಾರಾಜ ಮೈದಾನದಲ್ಲಿ ನಾಳೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾಧನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ನಾಳೆ ನಡೆಯಲಿರುವ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮಹಾರಾಜ ಮೈದಾನದಲ್ಲಿ ಜರ್ಮನ್ ಟೆಂಟ್ ನಲ್ಲಿ ನಿರ್ಮಾಣವಾದ ಬೃಹತ್ ಗಾತ್ರದ ವೇದಿಕೆ ನಿರ್ಮಾಣ ಮಾಡಲಾಗಿದೆ.
ನಾಳೆ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಲಾಗಿದ್ದು ಮೈಸೂರಿನ ಈ ಬಾರಿ ವಿಶೇಷವಾಗಿ ವೇದಿಕೆ ಸಜ್ಜಾಗಿದೆ. ವೇದಿಕೆಯ ಮಧ್ಯದಲ್ಲಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡು ಹೋಗೋದಕ್ಕೆ ಸ್ಪೆಷಲ್ ಟ್ರ್ಯಾಕ್ ನಿರ್ಮಿಸಲಾಗಿದ್ದು, ಸುಮಾರು 200 ಮೀಟರ್ ನಡೆದುಕೊಂಡು ಹೋಗಬೇಕಾಗುತ್ತದೆ.
ಇನ್ನು ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಕುರಿತು ಕಲಾಕೃತಿ ತಯಾರಿ ಮಾಡಲಾಗಿದ್ದು, ಕೃಷಿ ಅಧಿಕಾರಿಗಳಿಂದ ಚಿತ್ತಾಕರ್ಷಕ ರಂಗೋಲಿ ಸಿದ್ಧವಾಗುತ್ತಿದೆ. ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬರುವ ನಿರೀಕ್ಷೆ ಇದೆ. ಸಮಾವೇಶದ ವೇಳೆ ಅವಘಡ ಸಂಭವಿಸದಂತೆ ಪೊಲೀಸರು ಫುಲ್ ಹೈ ಅಲರ್ಟ್ ಆಗಿದ್ದಾರೆ.
Key words: Preparations, Mysore, congress, Sadhana conference
The post ನಾಳೆ ‘ಕೈ’ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿ, ಬೃಹತ್ ವೇದಿಕೆ ಸಜ್ಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.