ಬೆಂಗಳೂರು,ಮಾರ್ಚ್,7,2026 (www.justkannada.in): ಸಿಎಂ ಸಿದ್ದರಾಮಯ್ಯ ನಿನ್ನೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಈ ಬೆನ್ನಲ್ಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಕಲಬುರಗಿಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಲಿರುವ ಡಿಸಿಎಂ ಡಿಕೆ ಶಿವಕುಮಾರ್ ಇದಾದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಕಲಬುರಗಿಯಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನೀರಾವರಿ ಇಲಾಖೆಯ ಕೆಲವು ಕೆಲಸಗಳ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಮುನ್ನೆಲೆಗೆ ಬಂದ ವೇಳೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಈ ಮಧ್ಯೆ ಇಂದು ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ ಎಂದಿದ್ದಾರೆ.
Key words: DCM, DK Shivakumar, Delhi, tomorrow
The post ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




