ಬಾಗಲಕೋಟೆ,ಏಪ್ರಿಲ್,8,2026 (www.justkannada.in): ನಾಳೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ನಡೆಯಲಿದ್ದು ಚುನಾವಣಾಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಮಾತನಾಡಿ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 332 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಮತಗಟ್ಟೆ ಕೇಂದ್ರಗಳಿಗೆ 1564 ಚುನಾವಣಾ ಸಿಬ್ಬಂದಿಗಳನ್ನ ನಿಯೋಜನೆ ಮಾಡಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟಗಳಿಗೆ ಹೆಚ್ಚುವರಿ ಭದ್ರತೆ ವಹಿಸಲಾಗಿದೆ ಎಂದರು.
ಮತದಾನ ಮಾಡುವ ಕಾಲೇಜಿನ ವಿದ್ಯಾರ್ಥಿಗಳಿಗೆ ಭಧ್ರತೆ ಕಲ್ಪಿಸಿದ್ದೇವೆ. ಯಾರೂ ಭಯ ಪಡುವ ಅಗತ್ಯವಿಲ್ಲ. 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ವೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು.
Key words: Preparations, Bagalkot, by-election, tomorrow
The post ನಾಳೆ ಬಾಗಲಕೋಟೆ ಉಪಚುನಾವಣೆಗೆ ಸಿದ್ದತೆ: 332 ಮತಗಟ್ಟೆಗಳ ಸ್ಥಾಪನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




