ಬೆಂಗಳೂರು,ಜೂನ್,2,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ಇನ್ನು ಸಿಎಂ ಜೊತೆಗೆ 12 ರಿಂದ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಚಿವರ ಮೊದಲ ಹಂತದ ಪಟ್ಟಿ ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸುತ್ತಿದೆ.
ನಾಳೆ ಡಿಕೆ ಶಿವಕುಮಾರ್ ಸಿಎಂ ಆಗಿ ಪದಗ್ರಹಣ ಹಿನ್ನೆಲೆಯಲ್ಲಿ ಭದ್ರತೆ ಕುರಿತು ಸಿದ್ದತೆಗಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಇಂದು ಮಧ್ಯಾಹ್ನ 3 ಗಂಟೆಗೆ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
Key words: DK Shivakumar, oath, new CM , state, tomorrow
The post ನಾಳೆ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




