13
February, 2026

A News 365Times Venture

13
Friday
February, 2026

A News 365Times Venture

ನಾವು ರಾಜ್ಯಪಾಲರ ವಿರುದ್ಧ ಇಲ್ಲ: ಜೈ ಸಂವಿಧಾನ’ ಅನ್ನೂ ಉಲ್ಲೇಖಿಸದೆ ಹೋದ್ರು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಫೆಬ್ರವರಿ,2,2026 (www.justkannada.in): ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಮಾತಾಡುವಾಗ ನನ್ನನ್ನು “ಅಸಹಾಯಕ ಮುಖ್ಯಮಂತ್ರಿ” ಎಂದು ಕರೆದಿದ್ದಾರೆ. ಕೆಲವು ಬಾರಿ, “ಅಸತ್ಯದ ಎದುರು ಸತ್ಯ ಅಸಹಾಯಕವಾಗಿಬಿಡುತ್ತದೆ. ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ. ಮನರೇಗಾ ಬದಲಾಯಿಸಿ “ವಿಬಿ ಜಿ ರಾಮ್ ಜಿ” ಎಂದು ಮಾಡಿದ್ದಾರೆ.  ಇದರಲ್ಲಿರುವ ರಾಮ, ಧಶರಥ ರಾಮನೂ ಅಲ್ಲ. ಅಯೋಧ್ಯೆ ರಾಮನೂ ಅಲ್ಲ. ಹೆಸರು ಬದಲಾಯಿಸುವುದಕ್ಕೇ ಕೆಲವರನ್ನು ಅವರು ಇಟ್ಟುಕೊಂಡಿದ್ದಾರೆ ಅನ್ನಿಸುತ್ತೆಎಂದರು

ಸಂವಿಧಾನದ ಆರ್ಟಿಕಲ್ 176 ಓದಿದ್ದರೆ ಚನ್ನಾಗಿರುತ್ತಿತ್ತು. ಸಂವಿಧಾನ ಜಾರಿಯಾದ ದಿನದಿಂದ ಇವತ್ತಿವರೆಗೆ ಜಂಟಿ ಅಧಿವೇಶನಗಳು ನಡೆದುಕೊಂಡು ಬಂದಿವೆ. ಇದು ಸಂವಿಧಾನದ ಪ್ರಕಾರ ನಡೆದುಕೊಂಡು ಬರುತ್ತಿರುವ ಪದ್ಧತಿ.ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಜ್ ಅವರ ಬಾಯಲ್ಲೂ ಹೇಳಿಸಿದ್ದೀರಿ. H.D.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ “ನರೇಗ ಉದ್ಯೋಗ ಸಂಜೀವಿನಿ” ಎಂದು ಕರೆದಿದ್ದರು. ಈಗ ಬಿಜೆಪಿ ಜೊತೆ ಸೇರಿ ನರೇಗಾ ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ರಾಜ್ಯಪಾಲರ ಭಾಷಣದ ಮೇಲೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ 15 ಜನ ಸದಸ್ಯರು ಮಾತನಾಡಿದ್ದಾರೆ. ಕಾಂಗ್ರೆಸ್ ನ ವಂದನಾ ನಿರ್ಣಯ ಮಂಡಿಸಿದ ಪೊನ್ನಣ್ಣ, ಮತ್ತು ಪ್ರದೀಪ್ ಈಶ್ವರ್ ಅವರು ಅನುಮೋದನೆ ಮಾಡಿದ್ದಾರೆ. ಸುಮಾರು 9 ಜನ ಮಾತನಾಡಿದ್ದು, ಜೆಡಿಎಸ್ ನಿಂದ ಸುರೇಶ್ ಬಾಬುರವರು  ಮತ್ತು ಪಕ್ಷೇತರರಲ್ಲಿ ಇಬ್ಬರು ಸೇರಿದಂತೆ ಒಟ್ಟು 27 ಜನ ಮಾತನಾಡಿದ್ದಾರೆ. ಕಾಂಗ್ರೆಸ್ 5 ಗಂಟೆ 18 ನಿಮಿಷ , ಬಿಜೆಪಿಯವರು 8 ಗಂಟೆ 53 ನಿ , ಜೆಡಿಎಸ್ ನವರು 12 ನಿಮಿಷ ಮತ್ತು ಪಕ್ಷೇತರರು 54 ನಿಮಷ ಮಾತನಾಡಿದ್ದು, ಹೀಗೆ ಒಟ್ಟು 15 ಗಂಟೆ 17 ನಿಮಿಷ ಚರ್ಚೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.

ರಾಜ್ಯಪಾಲರು ಅವರು ಪೂರ್ಣ ಭಾಷಣವನ್ನು ಓದದೇ, ಮೊದಲನೇ  ಹಾಗೂ ಕಡೆಯ ಜೈಹಿಂದ್ ಜೈ ಕರ್ನಾಟಕ ಎಂದು ಓದಿದರು, ಭಾಷಣದಲ್ಲಿ ಬರೆದುಕೊಡಲಾಗಿದ್ದ ‘ಜೈಸಂವಿಧಾನ’ ವನ್ನು ಹೇಳಲಿಲ್ಲ. ರಾಷ್ಟ್ರಗೀತೆ ಮುಗಿಯುವವರೆಗೂ ರಾಜ್ಯಪಾಲರು ಇರಬಹುದಿತ್ತು.  ಈ ಬಗ್ಗೆ ಸಂವಿಧಾನದ ಕಲಂ 176 , 163 ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ ಎಂದರು.

ಶಾಸಕ ಸುನಿಲ್ ಕುಮಾರ್ ಅವರು ‘ಸರ್ಕಾರ ಆಡಳಿತ ಹದಗೆಟ್ಟಿದೆ ಮತ್ತು ಸಂವಿಧಾನರಹಿತ ಸರ್ಕಾರ’ , ‘ಅಸಹಾಯಕ ಮುಖ್ಯಮಂತ್ರಿ’ ಎಂದಿದ್ದಾರೆ. ಕೆಲವೊಮ್ಮ ಅಸತ್ಯದ ಎದುರು ಸತ್ಯ ಅಸಹಾಯಕವಾಗುತ್ತದೆ. ಜನರು ನಮ್ಮನ್ನು ಅವರ ಪ್ರತಿನಿಧಿಯಾಗಿ ಆಯ್ಕೆ ಮಾಡುತ್ತಾರೆ. ವಿರೋಧಪಕ್ಷದವರ ಮತ್ತು ಸರ್ಕಾರದವರ ಸಿದ್ಧಾಂತಗಳು ವಿಭಿನ್ನವಾಗಿರುತ್ತವೆ. ನಾವಿಬ್ಬರೂ ಪರಸ್ಪರ ಒಪ್ಪಲೇಬೇಕೆಂಬ ಷರತ್ತಿಲ್ಲ. ಆದರೆ ನಾವೆಲ್ಲರೂ ಸಂವಿಧಾನ ಒಪ್ಪಲೇಬೇಕು. ಸಂವಿಧಾನಬದ್ಧವಾಗಿ ಸರ್ಕಾರ, ಆಡಳಿತ ನಡೆಯಲೇಬೇಕು. ಸಂವಿಧಾನವನ್ನು ಯಾವುದೇ ಕಾರಣಕ್ಕೂ ವಿರೋಧಿಸಬಾರದು. ರಾಜ್ಯಪಾಲರು ಮೂಲತ: ಉತ್ತಮ ವ್ಯಕ್ತಿಯೇ. ನಾವು ರಾಜ್ಯಪಾಲರ ವಿರುದ್ಧವಿಲ್ಲ. ಆದರೆ ಕೇಂದ್ರ ಸರ್ಕಾರದ ನಮ್ಮ ವಿರೋಧವಿದೆ. ಭಾಷಣದಲ್ಲಿ ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜಿವಿಕ ಮಿಷನ್ ಗ್ರಾಮೀಣ)ವನ್ನು ಕೇಂದ್ರ ಜಾರಿಗೊಳಿಸಿದೆ. ಅದರಲ್ಲಿ ‘ಗ್ರಾಮ’ ಎನ್ನುವ ಪದವೂ ಇಲ್ಲ. ಈ ಕಾಯ್ದೆ ಜಾರಿಗೆ ಮುನ್ನ 176 ಕಲಂರನ್ನು ಕೇಂದ್ರ ವಿಶ್ಲೇಷಣೆ ಮಾಡಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Key words: not, against, Governor, Session, CM Siddaramaiah

The post ನಾವು ರಾಜ್ಯಪಾಲರ ವಿರುದ್ಧ ಇಲ್ಲ: ಜೈ ಸಂವಿಧಾನ’ ಅನ್ನೂ ಉಲ್ಲೇಖಿಸದೆ ಹೋದ್ರು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರ ಹೋದ್ರೂ ತೊಂದರೆ ಇಲ್ಲ: ಡಿಕೆಶಿ ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ- ಶಾಸಕ ಯತ್ನಾಳ್

ಉಡುಪಿ.ಫೆಬ್ರವರಿ,13,2026 (www.justkannada.in): ಸರ್ಕಾರ ಹೋದರೂ ತೊಂದರೆ ಇಲ್ಲ ಡಿಕೆ ಶಿವಕುಮಾರ್  ಶತಾಯಗತಾಯ...

ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ, ನಾನು ಮಾತನಾಡಲ್ಲ- ಸಚಿವ ರಾಮಲಿಂಗರೆಡ್ಡಿ

ಬೀದರ್,ಫೆಬ್ರವರಿ,13,2026 (www.justkannada.in): ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ...

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು,ಫೆಬ್ರವರಿ,13,2026 (www.justkannada.in): ಹಿರಿಯ ನಿರ್ದೇಶ ಜೋ ಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ...

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ...