4
March, 2026

A News 365Times Venture

4
Wednesday
March, 2026

A News 365Times Venture

ನಿಂಬಾಳ್ಕರ್ ಎತ್ತಂಗಡಿ, ಗೋವಿಂದರಾಜುಗೆ ಕೋಕ್

Date:

ಬೆಂಗಳೂರು,ಜೂನ್,6,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11ಜನರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದೀಗ ಇದರ ಬೆನ್ನಲ್ಲೇ ಇದೀಗ ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನ ಎತ್ತಂಗಡಿ ಮಾಡಲಾಗಿದ್ದು ಇನ್ನೊಂದೆಡೆ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರಿಗೂ ಕೋಕ್ ನೀಡಲಾಗಿದೆ.

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಗುಪ್ತಚರ ಇಲಾಖೆ ವೈಫಲ್ಯ ಎನ್ನುವ ಮಾತುಗಳು ಕೇಳಿ ಬಂದಿದ್ದವು. ವಿಪಕ್ಷ ನಾಯಕರು ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೆ ಇದೀಗ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗೆಯೇ ಗುಪ್ತಚರ ಇಲಾಖೆ ಎಡಿಜಿಪಿಯಾಗಿ ರವಿಕುಮಾರ್ ಅವರನ್ನ ನೇಮಕ ಮಾಡಿದೆ.

ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸ್ಥಾನಕ್ಕೂ ಕುತ್ತು ಬಂದಿದ್ದು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತರಾತುರಿಯಲ್ಲಿ ಸಮಾರಂಭ ಆಯೋಜಿಸಿದ್ದಕ್ಕೆ ಗೋವಿಂದರಾಜು ಅವರ ವಿರುದ್ದ ಸಭೆಯಲ್ಲಿ ಸಚಿವರು ಗರಂ ಆಗಿದ್ದರು ಎನ್ನಲಾಗಿದೆ.

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರೇ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಅಧಿಕಾರಿಗಳ ಕರ್ತವ್ಯಲೋಪದ ಬಗ್ಗೆ ಹೇಳಿದ್ದರು. ಅಲ್ಲದೇ ಗುಪ್ತಚರ ಇಲಾಖೆಯೂ ಸಹ ಫೇಲ್ ಆಗಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್​ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿದ್ದು ಜೊತೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರನ್ನೂ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.vtu

Key words: Stampede case, ADGP, Hemant Nimbalkar, Transfer

The post ನಿಂಬಾಳ್ಕರ್ ಎತ್ತಂಗಡಿ, ಗೋವಿಂದರಾಜುಗೆ ಕೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ...

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...