ಬೆಂಗಳೂರು,ಜೂನ್,16,2025 (www.justkannada.in): ಇಂದಿನಿಂದ ರಾಜ್ಯಾದ್ಯಂತ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಲಾಗಿದ್ದು, ನಿಷೇಧವಿದ್ದರೂ ಬೆಂಗಳೂರಿನ ಹಲವು ಕಡೆಗಳಲ್ಲಿ ಸಂಚರಿಸುತ್ತಿದ್ದ ಬೈಕ್ ಟ್ಯಾಕ್ಸಿಗಳನ್ನ ಆರ್ ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಇತ್ತೀಚೆಗೆ ಹೈಕೋರ್ಟ್ ನಿರಾಕರಿಸಿ ಓಲಾ, ಊಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದ್ದು ಈ ನಡುವೆಲೂ ಬೆಂಗಳೂರಿನ ಕೆಲವು ಕಡೆಗಳಲ್ಲಿ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿದ್ದವು. ಇದೀಗ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಗರದ ಹಲವೆಡೆ ಕಡೆ ಬೈಕ್ ಟ್ಯಾಕ್ಸಿ ಸೀಜ್ ಮಾಡಿದ್ದಾರೆ.
ರಾಜಾಜಿನಗರ, ಯಶವಂತಪುರ ಸೇರಿದಂತೆ ಹಲವು ಕಡೆ ನಿಷೇಧದ ನಡುವೆಯೂ ಬೈಕ್ ಟ್ಯಾಕ್ಸಿ ಸಂಚರಿಸುತ್ತಿದ್ದವು. ಈ ಹಿನ್ನೆಲೆ ಬೆಂಗಳೂರಿನಲ್ಲಿ RTO ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ.
Key words: Bike taxis, ban, Siege, RTO Bangalore
The post ನಿಷೇಧವಿದ್ದರೂ ಹಲವೆಡೆ ಬೈಕ್ ಟ್ಯಾಕ್ಸಿ ಸಂಚಾರ: RTO ಅಧಿಕಾರಿಗಳಿಂದ ಸೀಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.