11
March, 2026

A News 365Times Venture

11
Wednesday
March, 2026

A News 365Times Venture

ಪಹಲ್ಗಾಮ್ ಉಗ್ರರ ದಾಳಿ: ಭದ್ರತಾ ವೈಪಲ್ಯ ಅಂತಾ ಸ್ವತಃ ಕೇಂದ್ರ ಒಪ್ಪಿಕೊಂಡಿದೆ- ಮಲ್ಲಿಕಾರ್ಜುನ ಖರ್ಗೆ

Date:

ಬೆಂಗಳೂರು, ಏಪ್ರಿಲ್,26,2025 (www.justkannada.in):  ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನ ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿ ಸಂಬಂಧ ಇದಕ್ಕೆ  ಭದ್ರತಾ ವೈಫಲ್ಯ ಕಾರಣ  ಎಂದು ಸ್ವತಃ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ಭದ್ರತಾ ವೈಪಲ್ಯ ಎಂದು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದ್ದು, ಆ ಕಾರಣಕ್ಕಾಗಿ ಸಭೆ ಕರೆದಿದ್ದೇವೆ. ಇನ್ಮುಂದೆ ಈ ರೀತಿ ಆಗಲ್ಲ  ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದರು.

ಅಮಿತ್ ಶಾ ಅವರಿಗೆ ನಾವು ಹೇಳಿದ್ದೇವೆ .ಇದನ್ನು ಚಾಲೆಂಜ್ ಆಗಿ ತೆಗೆದುಕೊಳ್ಳಬೇಕು. ಎಲ್ಲವನ್ನೂ ವ್ಯವಸ್ಥೆ ಮಾಡಬೇಕಿತ್ತು. ನೀವು ವ್ಯವಸ್ಥೆ ಮಾಡದೆ ಇರುವುದರಿಂದಲೇ ಈ ಸ್ಥಿತಿಗೆ ಬಂದಿರೋದು ಎಂದು ತಿಳಿಸಿದ್ದೇವೆ ಎಂದರು.

ಮೂರು ಹಂತಗಳ ಭದ್ರತೆ  ಇದ್ದರೂ ಪಹಲ್ಗಾಮ್‌ ದಾಳಿಯ ವೇಳೆ ಜನರಿಗೆ ರಕ್ಷಣೆ ಕೊಡಲು ಆಗಲಿಲ್ಲ . ಏನೇ ಆದರೂ ಕೂಡ ದೇಶದ ದೃಷ್ಟಿಯಿಂದ ದೇಶದ ಒಗ್ಗಟ್ಟಿನ ದೃಷ್ಟಿಯಿಂದ ನಾವೆಲ್ಲರೂ ಕೂಡ ಒಂದಾಗಿ ರಕ್ಷಣೆ ಮಾಡೋಣ ಅಂತ ತಿಳಿಸಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Key words: Pahalgam, terror attack, Central government, security lapse, Mallikarjun Kharge

The post ಪಹಲ್ಗಾಮ್ ಉಗ್ರರ ದಾಳಿ: ಭದ್ರತಾ ವೈಪಲ್ಯ ಅಂತಾ ಸ್ವತಃ ಕೇಂದ್ರ ಒಪ್ಪಿಕೊಂಡಿದೆ- ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...