ಬೆಂಗಳೂರು,ಏಪ್ರಿಲ್,8,2025 (www.justkannada.in): ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ ಆಸ್ತಿ ಎಸ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ ಆಸ್ತಿ ಎಸ್ ಶೆಟ್ಟಿ 596 ಅಂಕ ಗಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ಭೂಮಿಕ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್ಯಾಂಕ್ ಪಡೆದಿದ್ದಾರೆ. ಭೂಮಿಕಾ ಆರ್ ಹೆಗ್ಡೆಗೆ 595 ಅಂಕ ಗಳಿಸಿದ್ದಾರೆ.
ಕಾಮರ್ಸ್ ವಿಭಾಗದಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ ಸಹನಾ ನಾಯಕ್ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ್ಯಾಂಕ್
ವಿಜ್ಞಾನ ವಿಭಾಗದಲ್ಲಿ ಉಡುಪಿಯ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಪೂರ್ವ್ ವಿ ಕುಮಾರ್ 595 ಅಂಕಗಳನ್ನು ಪಡೆದಿದ್ದಾನೆ.
Key words: PUC results, Minister Lakshmi Hebbalkar, happy , Udupi, first ranks
The post ಪಿಯು ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ: ಜಿಲ್ಲೆಯ ಮಕ್ಕಳ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.