15
May, 2026

A News 365Times Venture

15
Friday
May, 2026

A News 365Times Venture

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ- ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

Date:

ಬೆಂಗಳೂರು,ಮೇ,15,2026 (www.justkannada.in): ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು  ಒತ್ತಾಯಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನಿರ್ಧಾರ ಖಂಡಿಸಿದ ಸಿಎಂ ಸಿದ್ದರಾಮಯ್ಯ, ಮೋದಿ ಸರ್ಕಾರ ಚುನಾವಣೆ ಬಳಿಕ ದರ ಏರಿಕೆ ಮಾಡುತ್ತಾರೆ ಎಂದು ಗೊತ್ತಿತ್ತು. ಮೋದಿ ಸರ್ಕಾರವು ಹಲವು ಬಾರಿ ಬೆಲೆ ಏರಿಕೆ ಮಾಡಿದ್ದಾರೆ.  ಜನರು ಹಣದುಬ್ಬರದಿಂದ ತತ್ತರಿಸಿದ್ದಾರೆ. ಇದೀಗ ಪೆಟ್ರೋಲ್‌, ಡೀಸೆಲ್ ಬೆಲೆ‌ ಏರಿಕೆಯು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ್ದಾರೆ. ಇದು ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಹೀಗಾಗಿ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆಯನ್ನ 3 ರೂ. ಹೆಚ್ಚಳ ಮಾಡಿದೆ.

 

Key words: Revoke, petrol and diese, pric,e hike ,CM Siddaramaiah

The post ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಿರಿ- ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SIR ಮ್ಯಾಪಿಂಗ್: 13 ಕೋಟಿ ಜನರ ಹೆಸರು ಮತಪಟ್ಟಿಯಿಂದ ತೆಗೆಯಲಿದ್ದಾರೆ- ಸಚಿವ ಸಂತೋಷ್ ಲಾಡ್

ಬೆಂಗಳೂರು,ಮೇ,15,2026 (www.justkannada.in): ದೇಶದಲ್ಲಿ ಎಸ್ ಐಆರ್ ಮ್ಯಾಪಿಂಗ್ ಶುರುವಾಗಿದೆ 13 ಕೋಟಿ ಜನರ...

ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ

 ನವದೆಹಲಿ,ಮೇ,15,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ...

ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ

ಬೆಂಗಳೂರು,ಮೇ,14,2026 (www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರ ಸಂಬಂಧ...

ಮೈಸೂರು ಮಹಾರಾಣಿ ಕಾಲೇಜು ಹಾಸ್ಟೆಲ್ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,14,2026 (www.justkannada.in): ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ...