4
March, 2026

A News 365Times Venture

4
Wednesday
March, 2026

A News 365Times Venture

ಪೊಲೀಸರ ಅಮಾನತು ನಾಟಕವಷ್ಟೆ- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟೀಕೆ

Date:

ಬೆಂಗಳೂರು,ಜೂನ್,6,2025 (www.justkannada.in): ಆರ್ ಸಿಬಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಸಂಭ್ರಮಾಚರಣೆ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿರುವುದಕ್ಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸರ್ಕಾರದ ವೈಫಲ್ಯವೇ ಕಾರಣ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ.

ಇಂದು ಬಿಜೆಪಿ ಮತ್ತು ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಕಾಲ್ತುಳಿತದಲ್ಲಿ 11 ಜನರು ಸಾವು ಪ್ರಕರಣ  ಸಂಬಂಧ ಪೊಲೀಸರ ಅಮಾನತು ಮಾಡಿರುವುದು ನಾಟಕವಷ್ಟೇ. ‘ಒಂದು ತಿಂಗಳು ಸಸ್ಪೆಂಡ್ ಅಂತಾ ನಾಟಕ ಮಾಡುತ್ತೇವೆ, ಬೇಸರ ಮಾಡಿಕೊಳ್ಳಬೇಡಿ’ ಎಂಬುದಾಗಿ ಮೊದಲೇ ಹೇಳಿರುತ್ತಾರೆ ಅಷ್ಟೇ ಎಂದು ಟೀಕಿಸಿದರು.

ಪೊಲೀಸ್ ಇಲಾಖೆ ಸಲಹೆ ಧಿಕ್ಕರಿಸಿದ್ದಕ್ಕೆ 11 ಜೀವಗಳ ಬಲಿಯಾಗಿದೆ. ಅದಕ್ಕೆ ಮೂಲ ಕಾರಣ ರಾಜ್ಯ ಸರ್ಕಾರ. ತಮ್ಮ ತಪ್ಪು ಮುಚ್ಚಿಕೊಳ್ಳಲು  ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್​ ಸೇರಿ ಹಲವರ ಅಮಾನತು ಮಾಡಿದ್ದಾರೆ. ಹೊಸ ವರ್ಷಾಚರಣೆ ವೇಳೆ ಕಮಿಷನರ್ ದಯಾನಂದ್ ಇದ್ದರು. ಲಕ್ಷಾಂತರ ಜನ ಸೇರಿದ್ದರೂ ಸಣ್ಣ ಅಹಿತಕರ ಘಟನೆಗೆ ಅವಕಾಶ ಕೊಟ್ಟಿರಲಿಲ್ಲ. ಸಸ್ಪೆಂಡ್ ಆದ ಡಿಸಿಪಿ ಒಬ್ಬರು ‘ಅಪ್ಪಯ್ಯ’ನ ಆತ್ಮೀಯರು ಎಂದು ಹೆಚ್.ಡಿಕೆ ಹೇಳಿದರು.vtu

Key words: Union Minister, HD Kumaraswamy , suspension , police

The post ಪೊಲೀಸರ ಅಮಾನತು ನಾಟಕವಷ್ಟೆ- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...