21
September, 2026

A News 365Times Venture

21
Monday
September, 2026

A News 365Times Venture

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

Date:

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in):  ರಾಜ್ಯದ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೌರಕಾರ್ಮಿಕರಿಗಾಗಿ ಪತ್ರಕರ್ತರು ಬಳಗ ಒತ್ತಾಯಿಸಿದೆ.

ಹಿರಿಯ ಪತ್ರಕರ್ತರಾದ ಸುಭಾಷ್ ಹೂಗಾರ್, ಧರಣೀಶ್ ಬೂಕನಕೆರೆ, ಎನ್. ರವಿಕುಮಾರ್ ಟೆಲೆಕ್ಸ್, ಮಾರುತಿ ಪಾವಗಡ, ಟಿ. ಗುರುರಾಜ್, ಮಹಾಂತೇಶ ಹಿರೇಮಠ ಹಾಗೂ ಸೋಮಶೇಖರ್ ಕವಚೂರು ನೇತೃತ್ವದ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಹಾಗೂ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ತಕ್ಷಣ ಖಾಯಂಗೊಳಿಸಬೇಕು, ಸರ್ಕಾರಿ ನೌಕರರ ಸಮಾನ ಸ್ಥಾನಮಾನ ನೀಡಬೇಕು ಹಾಗೂ ಪ್ರತ್ಯೇಕ ವೇತನ ಮಂಡಳಿ ರಚಿಸಿ ವೇತನ ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿದೆ.

ಪೌರಕಾರ್ಮಿಕರಿಗೆ ನಿಯಮಿತ ಆರೋಗ್ಯ ತಪಾಸಣೆ, ನಗದುರಹಿತ ಆರೋಗ್ಯ ಚಿಕಿತ್ಸಾ ಯೋಜನೆ, ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಧನ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಬೇಕು. ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರು, ಸಹಾಯಕರು ಹಾಗೂ ಆಪರೇಟರ್ ‌ಗಳನ್ನೂ ಪೌರಕಾರ್ಮಿಕರೆಂದು ಪರಿಗಣಿಸಿ ಖಾಯಂಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.

ಸೇವೆಯಲ್ಲಿರುವಾಗ ಮೃತಪಟ್ಟ ಪೌರಕಾರ್ಮಿಕರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಬೇಕು ಹಾಗೂ ಪೌರಕಾರ್ಮಿಕರ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ಸಮಿತಿ ರಚಿಸಿ ಮೂರು ತಿಂಗಳೊಳಗೆ ವರದಿ ಪಡೆದು ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಒತ್ತಾಯಿಸಿದೆ.

Key words: Journalists, urge, fulfillment, civic workers, demands

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ- ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in): ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ...

ಸಮಸ್ಯೆ ಇಟ್ಟುಕೊಂಡು ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ: ರೈತರು, ಜನರ ರಕ್ಷಣೆಗೆ ಬದ್ಧ-ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಸೆಪ್ಟಂಬರ್‌,21,2026 (www.justkannada.in): ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ....

ಹಸಿ ಮತ್ತು ಒಣ ಕಸವನ್ನು ‌ಮೂಲದಲ್ಲೇ ಬೇರ್ಪಡಿಸುವ ಬಗ್ಗೆ ಜಾಗೃತಿ ಮೂಡಿಸಿ- ಸಿ. ಶಂಕರ ಅಂಕನಶೆಟ್ಟಿಪುರ

ಮೈಸೂರು, ಸೆಪ್ಟಂಬರ್‌, 21,2026 (www.justkannada.in): ಸಾರ್ವಜನಿಕರು ಕಸವನ್ನು ಪೌರಕಾರ್ಮಿಕರಿಗೆ ನೀಡುವ ಮೊದಲೇ...

ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ- ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ...